ಕಾರಾಗೃಹ ಅವ್ಯವಹಾರ ಮಾಹಿತಿ ಪಡೆದು ಕ್ರಮ: ಸಚಿವ ಜಯಚಂದ್ರ

ಬೆಂಗಳೂರು, ಜು. 13: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಸಂಬಂಧ ಸಂಜೆಯೊಳಗೆ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಂಧಿಯಾಗಿರುವ ಎಐಎಡಿಎಂಕೆ ಕಾರ್ಯದರ್ಶಿ ಶಶಿಕಲಾ ನಟರಾಜನ್‌ಗೆ ವಿಶೇಷ ಆತಿಥ್ಯ ಕಲ್ಪಿಸಲು ಕಾರಾಗೃಹ ಡಿಜಿಪಿ ಎಚ್.ಎನ್.ಸತ್ಯನಾರಾಯಣರಾವ್ 2ಕೋಟಿ ರೂ.ಲಂಚ ಪಡೆದಿದ್ದಾರೆಂದು ಡಿಐಜಿ ರೂಪಾ ನೀಡಿರುವ ದೂರಿನ ಕುರಿತ ಮಾಧ್ಯಮಗಳ ವರದಿಯನ್ನು ಗಮನಿಸಿದ್ದೇನೆ ಎಂದರು.
ಈ ಪ್ರಕರಣ ಸಂಬಂಧ ಗೃಹ ಇಲಾಖೆ ಕಾರ್ಯದರ್ಶಿ ಸುಭಾಶ್ಚಂದ್ರ ಅವರೊಂದಿಗೆ ಸಂಪರ್ಕದಲ್ಲಿದ್ದು, ಕೂಡಲೇ ಮಾಹಿತಿ ಪಡೆದು ಕಾನೂನು ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ರೂಪಾ ಅವರು ನೀಡಿರುವ ವರದಿಯನ್ನು ನಾನು ಗಮನಿಸಿಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ಸತ್ಯವಂತರಿಗೆ ಇಲಾಖೆಯಲ್ಲಿ ಸೂಕ್ತ ರಕ್ಷಣೆ ದೊರೆಯಲಿದೆ ಎಂದು ಹೇಳಿದರು.
Next Story





