ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

ಪುತ್ತೂರು, ಜು.13: ಪುತ್ತೂರು ಉದ್ಯಮಿ ಕೆ.ಎಸ್. ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪ್ರವರ್ತನೆಯ ರೈ ಎಸ್ಟೇಟ್ಸ್ ಎಜುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗುರುವಾರ ಸೈಂಟ್ ಫಿಲೋಮಿನಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣಾ ಕಾರ್ಯಕ್ರಮ ಕಾಲೇಜಿನ ಸೆಮಿನರ್ ಹಾಲ್‌ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕೆ.ಎಸ್ ಅಶೋಕ್ ಕುಮಾರ್ ರೈ, ಕಾಲೇಜಿನ ಪ್ರಾಂಶುಪಾಲ ಪ್ರೊ. ಲಿಯೋ ನೊರೋನ್ಹಾ, ಉಪನ್ಯಾಸಕರಾದ ಪ್ರೊ. ಡಾ. ವಿಜಯಕುಮಾರ್ ಮೊಳೆಯಾರ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಭಾರತಿ ರೈ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಫಿಲೋಮಿನಾ ಕಾಲೇಜಿನ 148 ಪದವಿ ವಿದ್ಯಾರ್ಥಿಗಳಿಗೆ ಹಾಗೂ 25 ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸನ್ನು ನೀಡಲಾಯಿತು.
Next Story





