Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸಚಿವ ರಮೇಶ್ ಜಿಗಜಿಣಗಿ...

ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ರಾಜೀನಾಮೆಗೆ ಆಮ್‌ ಆದ್ಮಿಪಕ್ಷ ಆಗ್ರಹ

ಟೋಲ್ ಪ್ಲಾಜಾ ಭ್ರಷ್ಟಾಚಾರ ಹಗರಣ

ವಾರ್ತಾಭಾರತಿವಾರ್ತಾಭಾರತಿ14 July 2017 6:38 PM IST
share
ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ರಾಜೀನಾಮೆಗೆ ಆಮ್‌ ಆದ್ಮಿಪಕ್ಷ ಆಗ್ರಹ

ಬೆಂಗಳೂರು, ಜು.14: ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾ ನಿರ್ಮಾಣದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ನೇರವಾಗಿ ಭಾಗಿಯಾಗಿದ್ದು, ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಸಂಚಾಲಕ ಪೃಥ್ವಿರೆಡ್ಡಿ, ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗಸನಾಳ ಬಳಿ ನಿರ್ಮಿಸಲು ಉದ್ದೇಶಿಸಿದ್ದ ಟೋಲ್ ಪ್ಲಾಜಾವನ್ನು ತಡೆಗುಂಡಿಗೆ ಸ್ಥಳಾಂತರಿಸುವ ಮೂಲಕ ಸಂಸದ ರಮೇಶ್ ಜಿಗಜಿಣಗಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ತಡೆಗುಂಡಿ ಬಳಿ ಟೋಲ್ ಪ್ಲಾಜಾ ನಿರ್ಮಿಸಲು ಸಾವಿರಾರು ರೈತರ ಜಮೀನು ಸ್ವಾಧೀನಪಡಿಸಿಕೊಂಡಿದೆ. ಆದರೆ, ಜಿಗಜಿಣಗಿ ಅವರು ಪ್ರಾಧಿಕಾರಕ್ಕೆ ಪತ್ರ ಬರೆದು ಮಂಜುನಾಥ ಟಿ.ಪಾಟೀಲ್ ಮತ್ತು ಸಂಜಯ್ ಬಿಟಗಿ ಕುಟುಂಬದ ಜಮೀನು ಸ್ವಾಧೀನಪಡಿಸಿಕೊಂಡು ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಅದರಂತೆ ಈ ಎರಡೂ ಕುಟುಂಬದ ಜಮೀನಿಗೆ 30ರಿಂದ40 ಕೋಟಿ ರೂ.ಗಳಷ್ಟು ಪರಿಹಾರ ಕೊಡಿಸಿದ್ದಾರೆ. ನೂರಾರು ರೈತರ ಜಮೀನು ಸ್ವಾಧೀನಕ್ಕೆ ಒಳಗಾಗಿದ್ದರೂ ಈ ಎರಡು ಕುಟುಂಬಗಳಿಗೆ ಮಾತ್ರ ದುಬಾರಿ ಪರಿಹಾರ ಕೊಡಿಸುವ ಮೂಲಕ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಮತ್ತು ಜಿಗಜಣಗಿ ನಡುವೆ ನಡೆದಿರುವ ಪತ್ರ ವ್ಯವಹಾರದಲ್ಲಿ ಪ್ರತಿ ಪತ್ರದಲ್ಲೀ ‘ವಿಐಪಿ’ ರೆಫರೆನ್ಸ್ ಎಂದು ನಮೂದಿಸಲಾಗಿದೆ. ಹಾಗಾಗಿ ಪ್ರಾಧಿಕಾರದವರು ಈ ಎರಡು ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಿದ್ದಾರೆ. ಈ ಹೆಚ್ಚಿನ ಪರಿಹಾರ ಪಡೆದಿರುವವರು ಜಿಗಜಿಣಗಿ ಅವರ ಆಪ್ತರು. ಅವರು ಮೂಲದಲ್ಲಿ ರೈತರಲ್ಲ. ಅಗಸನಾಳ ಬಳಿ ಟೋಲ್ ಪ್ಲಾಜಾ ನಿರ್ಮಿಸುವ ಪ್ರಸ್ತಾವನೆ ಇದ್ದಾಗಲೇ ಈ ಎರಡು ಕುಟುಂಬದವರು ತಮ್ಮ ಹೆಂಡತಿ, ಮಕ್ಕಳ ಹೆಸರಿನಲ್ಲಿ ತಡೆಗುಂಡಿ ಬಳಿ ರೈತರ ಬಳಿ ಕಡಿಮೆ ದರಕ್ಕೆ ಜಮೀನು ಖರೀದಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಬಳಿಕ ಅಗಸನಾಳ ಬಳಿ ಇರುವ ರೈತರು ಬಡವರು, ಇವರ ಜಮೀನು ಸ್ವಾಧೀನಪಡಿಸಿಕೊಳ್ಳುವುದು ಬೇಡ. ಬದಲಾಗಿ ತಡೆಗುಂಡಿ ಬಳಿ ರೈತರ ಜಮೀನು ಸ್ವಾಧೀನಪಡಿಸಿಕೊಳ್ಳಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಿಗಜಿಣಗಿ ಪತ್ರ ಬರೆದಿದ್ದರಿಂದ ಟೋಲ್ ಪ್ಲಾಜಾ ನಿರ್ಮಾಣ ತಡೆಗುಂಡಿಗೆ ಸ್ಥಳಾಂತರವಾಗಿದೆ. ಈ ಪ್ರಕರಣದಲ್ಲಿ ಜಿಗಜಿಣಗಿ ಅವರ ಸ್ವಹಿತಾಸಕ್ತಿ ಕೆಲಸ ಮಾಡಿದೆ. ಅಲ್ಲದೆ, ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು.

ಈ ಟೋಲ್ ಪ್ಲಾಜಾ ಹಗರಣ ಕುರಿತು ಸಿಬಿಐಗೆ ದಾಖಲೆ ಸಮೇತ ದೂರು ನೀಡಲಾಗಿದೆ. ಪ್ರತ್ಯೇಕ ತನಿಖಾಧಿಕಾರಿ ನೇಮಿಸುವುದಾಗಿ ಸಿಬಿಐ ಭರವಸೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಕ್ರಮದಲ್ಲಿ ಭಾಗಿಯಾಗಿರುವ ಜಿಗಜಿಣಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು. ಜಿಗಜಿಣಗಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕೇಂದ್ರ ಸರಕಾರದ ಹಿಡಿತದಲ್ಲಿರುವ ಸಿಬಿಐನಲ್ಲಿ ಸರಿಯಾದ ನ್ಯಾಯ ಸಿಗದಿದ್ದರೆ, ಟೋಲ್ ಪ್ಲಾಜಾಗೆ ಭೂಮಿ ಕಳೆದುಕೊಂಡಿರುವ ರೈತರ ಜೊತೆಗೂಡಿ ತೀವ್ರ ಹೋರಾಟ ನಡೆಸಲಾಗುತ್ತದೆ ಎಂದು ಪೃಥ್ವಿರೆಡ್ಡಿ ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X