Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೆಮ್ಮದಿಯ ಬದುಕಿಗೆ ಪರಿಸರದ ಸಮತೋಲನ...

ನೆಮ್ಮದಿಯ ಬದುಕಿಗೆ ಪರಿಸರದ ಸಮತೋಲನ ಮುಖ್ಯ: ಆರ್.ಕೆ.ಎಂ.ಎಂ.ಮಹಾಸ್ವಾಮೀಜಿ

ಪರಿಸರ ಜಾಗೃತಿ ಮತ್ತು ಕಾನೂನು ಶಿಬಿರ

ವಾರ್ತಾಭಾರತಿವಾರ್ತಾಭಾರತಿ14 July 2017 8:50 PM IST
share
ನೆಮ್ಮದಿಯ ಬದುಕಿಗೆ ಪರಿಸರದ ಸಮತೋಲನ ಮುಖ್ಯ: ಆರ್.ಕೆ.ಎಂ.ಎಂ.ಮಹಾಸ್ವಾಮೀಜಿ

ಮಡಿಕೇರಿ, ಜು.14: ಗಿಡ, ಮರ, ಪ್ರಾಣಿ ಮತ್ತು ಪಕ್ಷಿಗಳು ಪ್ರಕೃತಿಯ ಅವಿಭಾಜ್ಯ ಅಂಗವಾಗಿದ್ದು, ಇವು ಪರಿಸರ ಸಮತೋಲನಕ್ಕೆ ಸಹಕಾರಿಯಾಗಿವೆ. ಇವುಗಳನ್ನು ಪ್ರತಿಯೊಬ್ಬರು ಉಳಿಸಿ ಬೆಳೆಸಬೇಕೆಂದು ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಆರ್.ಕೆ.ಎಂ.ಎಂ.ಮಹಾಸ್ವಾಮೀಜಿ ಅವರು ಕರೆ ನೀಡಿದ್ದಾರೆ.
 

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಬಾಲಕರ ಬಾಲಮಂದಿರ, ರೋಟರಿ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಬಾಲಕರ ಬಾಲಮಂದಿರದಲ್ಲಿ ನಡೆದ ಗಿಡ ನೆಡುವ ಕಾರ್ಯಕ್ರಮ ಮತ್ತು ಕಾನೂನು ಶಿಬಿರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಬ್ಬರೂ ನೆಮ್ಮದಿಯ ಬದುಕು ನಡೆಸುವಂತಾಗಬೇಕಾದರೆ ಪರಿಸರ ಸಮತೋಲನದಿಂದ ಕೂಡಿರಬೇಕು. ಪರಿಸರ ಸಂರಕ್ಷಣೆ ಕಾಪಾಡಿದಾಗ ಉತ್ತಮ ಜೀವನ ನಡೆಸಬಹುದು. ಪ್ಲಾಸ್ಟಿಕ್ ಬಳಕೆಯನ್ನು ಮಾಡಬಾರದು ಎಂದು ಅವರು ಹೇಳಿದರು. 14 ವರ್ಷದೊಳಗಿನ ಎಲ್ಲರಿಗೂ ಉಚಿತ ಶಿಕ್ಷಣವಿದ್ದು, ಅದನ್ನು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಮಕ್ಕಳನ್ನು ದುಡಿಮೆಗೆ ದೂಡಬಾರದು. ಮಕ್ಕಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಿದೆ ಎಂದು ಸಲಹೆ ನೀ ಡಿದರು.

ಒಂದನೇ ಅಪರ ಮತ್ತು ಜಿಲ್ಲಾ ಸೆಷನ್ ನ್ಯಾಯಾಧೀಶರಾದ ಡಿ.ಪವನೇಶ್ ಅವರು ಮಾತನಾಡಿ, ದೇಶದಲ್ಲಿ ಸಂವಿಧಾನವೇ ಮೂಲ ಗ್ರಂಥವಾಗಿದ್ದು, ಮೂಲಭೂತ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನು ಪಾಲಿಸುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ರೋಟರಿಯ ಜಿಲ್ಲಾ ಗವರ್ನರ್ ಸುರೇಶ್ ಚಂಗಪ್ಪ ಅವರು ಮಾತನಾಡಿ, ರೋಟರಿ ವತಿಯಿಂದ ಜಿಲ್ಲೆಯಲ್ಲಿ 1 ಲಕ್ಷ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ನೆಟ್ಟ ಗಿಡವನ್ನು ಮೂರು ವರ್ಷದವರೆಗೆ ಆರೈಕೆ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ನೀವು (ವಿದ್ಯಾರ್ಥಿಗಳು) ನೆಟ್ಟ ಗಿಡ ದೊಡ್ಡದಾದ ನಂತರ ಮರವಾಗಿ ನೋಡುವಂತಾಗಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಉಸಿರಾಡಲು ಗಾಳಿ, ನೀರು ಬೇಕಾದಲ್ಲಿ ನೈಸರ್ಗಿಕ ಸಂಪತ್ತನ್ನು ಸಂರಕ್ಷಣೆ ಮಾಡಬೇಕು ಎಂದು ಅವರು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸಫ್, ಮಡಿಕೇರಿ ರೋಟರಿ ಅಧ್ಯಕ್ಷರಾದ ಪ್ರೀತಂ, ಮಡಿಕೇರಿ ರೋಟರಿ ಕಾರ್ಯದರ್ಶಿ ಕೆ.ಎಸ್.ತಮ್ಮಯ್ಯ, ಬಾಲ ನ್ಯಾಯ ಮಂಡಳಿ ಸದಸ್ಯರಾದ ಬಿ.ಎಸ್.ಕುಮಾರಿ, ಅರಣ್ಯ ಇಲಾಖೆಯ ಜಗದೀಶ್, ಬಾಲಕರ ಬಾಲಮಂದಿರದ ಮೇಲ್ವಿಚಾರಕರಾದ ಚರಣ್ ಇತರರು ಇದ್ದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X