ಉಡುಪಿ: ಹೊಸ ತಾಲೂಕುಗಳ ರಚನೆಗೆ ಪೂರ್ವಭಾವಿ ಸಭೆ

ಉಡುಪಿ, ಜು.14: ಉಡುಪಿ ಜಿಲ್ಲೆಯಲ್ಲಿ ಹೊಸ ತಾಲೂಕುಗಳ ರಚನೆ ಸಂಬಂಧ ಇಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ವಿಶೇಷ ಗ್ರಾಮಸಭೆ ನಡೆಸಿ ನಡಾವಳಿ ಕಳುಹಿಸಲು ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಿದರು. ತಾಲೂಕು ಕಚೇರಿಗಳನ್ನೊಳಗೊಂಡಂತೆ ತಾಲೂಕಿಗೆ ಅಗತ್ಯವಾಗಿರುವ ಮೂಲ ಸೌಕರ್ಯ ಕಲ್ಪಿಸಲು ಜಾಗ ಮತ್ತು ಸಿಬ್ಬಂದಿ ನೇಮಕ ಸಂಬಂಧ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಿದರು. ವಿಶೇಷ ಗ್ರಾಮ ಸಭೆ ನಡೆಸಿ ನಡಾವಳಿ ಕಳುಹಿಸಲು ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಿದರು.
ತಾಲೂಕು ಕಚೇರಿಗಳನ್ನೊಳಗೊಂಡಂತೆ ತಾಲೂಕಿಗೆ ಅಗತ್ಯವಾಗಿರುವ ಮೂಲ ಸೌಕರ್ಯ ಕಲ್ಪಿಸಲು ಜಾಗ ಮತ್ತು ಸಿಬ್ಬಂದಿ ನೇಮಕ ಸಂಬಂಧ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ, ಕುಂದಾಪುರದ ಸಹಾಯಕ ಆಯುಕ್ತೆ ಶಿಲ್ಪಾನಾಗ್ ಉಪಸ್ಥಿತರಿದ್ದರು.
Next Story





