Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜು.17ರ ರಾಷ್ಟ್ರಪತಿ ಚುನಾವಣೆಗೆ ಸಕಲ...

ಜು.17ರ ರಾಷ್ಟ್ರಪತಿ ಚುನಾವಣೆಗೆ ಸಕಲ ಸಿದ್ಧತೆ: ಎಸ್.ಮೂರ್ತಿ

ವಾರ್ತಾಭಾರತಿವಾರ್ತಾಭಾರತಿ14 July 2017 10:11 PM IST
share
ಜು.17ರ ರಾಷ್ಟ್ರಪತಿ ಚುನಾವಣೆಗೆ ಸಕಲ ಸಿದ್ಧತೆ: ಎಸ್.ಮೂರ್ತಿ

ಬೆಂಗಳೂರು, ಜು. 14: ಇದೇ ತಿಂಗಳ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವಿಧಾನಸೌಧದ ಮೊದಲ ಮಹಡಿಯಲ್ಲಿನ ಕೊಠಡಿ ಸಂಖ್ಯೆ-106ರಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭಾ ಕಾರ್ಯದರ್ಶಿ ಎಸ್.ಮೂರ್ತಿ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜು.17ರ ಬೆಳಗ್ಗೆ 10ರಿಂದ ಸಂಜೆ 5ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಿದ್ದು, 224 ಮಂದಿ ಶಾಸಕರು ಹಾಗೂ ಲೋಕಸಭೆ ಕಾರ್ಯದರ್ಶಿಯ ಅನುಮತಿ ಪಡೆದುಕೊಂಡ ರಾಜ್ಯದಿಂದ ಆಯ್ಕೆಯಾದ ಸಂಸದರು ಇಲ್ಲಿಯೆ ಮತದಾನ ಮಾಡಲು ಅವಕಾಶವಿದೆ ಎಂದು ಹೇಳಿದರು. ಅಲ್ಲದೆ, ಅನ್ಯ ರಾಜ್ಯಗಳ ಶಾಸಕರು, ಸಂಸದರು ತಮ್ಮ ಮತ ಪತ್ರವನ್ನು ರಾಜ್ಯಕ್ಕೆ ವರ್ಗಾವಣೆ ಮಾಡಿಕೊಂಡು ಮತ ಚಲಾಯಿಸುವ ಅವಕಾಶವೂ ಇದೆ ಎಂದ ಎಸ್.ಮೂರ್ತಿ, ಮತದಾರರಾದವರು ತಮ್ಮ ಮತವನ್ನು ಮತಪತ್ರದ ಮೂಲಕ ರಹಸ್ಯವಾಗಿ ಚಲಾಯಿಸಬಹುದಾಗಿದೆ ಎಂದು ವಿವರ ನೀಡಿದರು.

ನೀಲಿ ಶಾಯಿ ಪೆನ್ ಬಳಕೆ: ಮತಪತ್ರದ ಮೂಲಕ ರಹಸ್ಯ ಮತದಾನಕ್ಕೆ ನೀಲಿ ಶಾಯಿಯ ಪೆನ್ ಬಳಕೆ ಮಾಡಬೇಕಾಗುತ್ತದೆ. ಅದನ್ನು ಮತ ಕೇಂದ್ರದಲ್ಲೆ ಒದಗಿಸಲಾಗುವುದು ಎಂದ ಅವರು, ಮತದಾರರಾದವರು ಮತಪತ್ರದಲ್ಲಿ ಮೊದಲ ಪ್ರಾಶಸ್ತ್ಯ ಮತಕ್ಕೆ-1, ಎರಡನೆ ಪ್ರಾಶಸ್ತ್ಯದ ಮತಕ್ಕೆ-2 ಎಂದು ನಮೂದಿಸಬೇಕು.
ಒಂದು ವೇಳೆ ಕೇವಲ 2 ಎಂದು ಬರೆದಲ್ಲಿ ಆ ಮತ ಅಸಿಂಧುವಾಗಲಿದೆ. ಇದನ್ನು ಎಲ್ಲ ಮತದಾರರ ಗಮನಕ್ಕೆ ತರಲಾಗಿದೆ ಎಂದ ಅವರು, ಮತಪೆಟ್ಟಿಗೆ ಈಗಾಗಲೇ ವಿಧಾನಸೌಧದ ಕೊಠಡಿ-107ರಲ್ಲಿ ಭದ್ರವಾಗಿಡಲಾಗಿದೆ. ಆ ಕೊಠಡಿಗೆ ಭದ್ರತೆ ಕಲ್ಪಿಸಲಾಗಿದೆ. ಮತದಾನದ ದಿನ ಚುನಾವಣಾ ಆಯೋಗ ನಿಯೋಜನೆ ಮಾಡಿರುವ ಚುನಾವಣಾ ವೀಕ್ಷಕರ ಸಮ್ಮುಖದಲ್ಲಿ ಅದನ್ನು ಮತ ಕೇಂದ್ರಕ್ಕೆ ತರಲಾಗುವುದು ಎಂದು ಅವರು ತಿಳಿಸಿದರು.

ವಿಮಾನದ ಮೂಲಕ ದಿಲ್ಲಿಗೆ ರವಾನೆ: ರಾಷ್ಟ್ರಪತಿ ಚುನಾವಣೆ ಮತದಾನ ಪೂರ್ಣಗೊಂಡ ಬಳಿಕ ಮತಪೆಟ್ಟಿಗೆಯನ್ನು ವಿಮಾನದ ಮೂಲಕ ಹೊಸದಿಲ್ಲಿಗೆ ರವಾನಿಸಲಾಗುತ್ತದೆ. ಮತಪೆಟ್ಟಿಗೆ ಕೊಂಡೊಯ್ಯಲು ವಿಮಾನದಲ್ಲಿ ಮತಪೆಟ್ಟಿಗೆಗೆ ಒಂದು ಆಸನ ಕಾಯ್ದಿರಿಸಲಾಗಿದೆ. ಮತಪೆಟ್ಟಿಗೆಯೊಂದಿಗೆ ತಾವು, ವೀಕ್ಷಕರು ವಿಮಾನದಲ್ಲಿ ಪ್ರಯಾಣ ಮಾಡಿ ಲೋಕಸಭೆ ಕಾರ್ಯದರ್ಶಿಗೆ ಹಸ್ತಾಂತರಿಸಲಾಗುವುದು  ಎಂದು ಅವರು ಹೇಳಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X