ಮೈಮೇಲೆ ಬಿದ್ದ ವಿದ್ಯುತ್ ತಂತಿ: ಓರ್ವ ಮೃತ್ಯು
ಬಂಟ್ವಾಳ, ಜು. 14: ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿಯೊಂದು ಮೈಮೇಲೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಪೆರುವಾಯಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪೆರುವಾಯಿ ಗ್ರಾಮದ ಕಾನಮನೆ ನಿವಾಸಿ ಸಿದ್ದಿಕುಂಞ(45) ವಿದ್ಯುತ್ ತಂತಿ ಬಿದ್ದು ಮೃತರಾದವರು. ತನ್ನ ಮನೆಯ ತೋಟದಲ್ಲಿ ಹುಲ್ಲು ತೆಗೆಯುತ್ತಿದ್ದ ವೇಳೆ ವಿದ್ಯುತ್ ತಂತಿಯೊಂದು ತಂಡಾಗಿ ಮೈ ಮೇಲೆ ಬಿದ್ದ ಪರಿಣಾಮ ಅವರು ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಪುತ್ತೂರು ಮಹಾವೀರ ಆಸ್ಪತ್ರೆಗೆ ದಾಖಲು ಮಾಡಿದ್ದರು. ಅಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





