ವಕ್ಫ್ ಮಂಡಳಿಯ ಆಡಳಿತ ಸಮಿತಿ ಚುನಾವಣೆಗೆ ಅಧಿಸೂಚನೆ
ಮಂಗಳೂರು, ಜು.14: ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಬೆಂಗಳೂರು ಇದರ ಆಡಳಿತ ಸಮಿತಿಯ ಸದಸ್ಯರನ್ನು ಆರಿಸುವ ಸಲುವಾಗಿ ಚುನಾವಣೆ ನಡೆಸಲು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಧಿಸೂಚನೆ ಹೊರಡಿಸಿರುತ್ತಾರೆ.
ಈ ಚುನಾವಣೆಯಲ್ಲಿ ಭಾಗವಹಿಸಲು ಮುಖ್ಯವಾಗಿ ವಕ್ಫ್ ಸಂಸ್ಥೆಗಳ ಆಡಳಿತ ಸಮಿತಿಯು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ಅಂಗೀಕಾರಗೊಂಡಿರಬೇಕು ಹಾಗೂ ವಕ್ಫ್ ಸಂಸ್ಥೆಯ ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಅಧಿಕವಿರಬೇಕು. ವಕ್ಫ್ ನಿಧಿಯನ್ನು ಪಾವತಿಸಿ ನಿರಾಕ್ಷೇಪಣಾ ಪತ್ರವನ್ನು ಪಡೆದಿರಬೇಕು.
ಈ ನಿಟ್ಟಿನಲ್ಲಿ ದ.ಕ. ಜಿಲ್ಲೆಯ ಒಂದು ಲಕ್ಷ ರೂ.ಗಿಂತ ಹೆಚ್ಚಿನ ಆದಾಯವಿರುವ ವಕ್ಫ್ ಸಂಸ್ಥೆಗಳು ರಾಜ್ಯ ವಕ್ಫ್ ಮಂಡಳಿಯ ಮಾದರಿ ನಿಯಮಾವಳಿ (ಬೈಲಾ)ಯನ್ನು ಅಂಗೀಕರಿಸಿ ಆಡಳಿತ ಕಮಿಟಿಯನ್ನು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ಅನುಮೋದಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವಕ್ಫ್ ಕಚೇರಿ, ಅಲ್ಫಸಂಖ್ಯಾತರ ಕಲ್ಯಾಣ ಭವನದ 2ನೆ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಭೇಟಿ ನೀಡಬಹುದು ಅಥವಾ ದೂ.ಸಂ.0824-2420078ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಕ್ಫ್ ಕಚೇರಿಯ ಪ್ರಕಟನೆ ತಿಳಿಸಿದೆ.





