ಹಣಕಾಸಿನ ವೈಷಮ್ಯ: ವ್ಯಕ್ತಿಗೆ ಹಲ್ಲೆ
ಮಂಗಳೂರು, ಜು.14: ನಗರದ ನಿಡ್ಡೇಲ್ ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಹಣಕಾಸಿನ ವೈಷಮ್ಯಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಸತೀಶ್ (50) ಹಲ್ಲೆಗೊಳಗಾದ ವ್ಯಕ್ತಿ. ಇವರು ಶುಕ್ರವಾರ ಸಂಜೆ 4:30ರ ವೇಳೆಗೆ ನಿಡ್ಡೇಲ್ ಬಳಿ ಇದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಣಕಾಸಿನ ವೈಷಮ್ಯವೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಹಲ್ಲೆ ನಡೆಸಿದ ವ್ಯಕ್ತಿಗಳಲ್ಲಿ ಓರ್ವ ಅರ್ಜುನ್ ಎಂದು ಗುರುತಿಸಲಾಗಿದೆ. ಕಂಕನಾಡಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story





