ಮಿಲಾಗ್ರಿಸ್ ಕಾಲೇಜಿನಲ್ಲಿ ಜಿಎಸ್‌ಟಿ ಸಂವಾದ
ಉಡುಪಿ, ಜು.14: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಕಾಲೇಜಿನ ಆಡಿಯೋ ವಿಜುವಲ್ ಹಾಲ್‌ನಲ್ಲಿ ಜು.19ರ ಅಪರಾಹ್ನ 1:30ಕ್ಕೆ ‘ಜಿಎಸ್‌ಟಿ’ ಕುರಿತು ಸಂವಾದ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.
ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ನೋರ್ಬರ್ಟ್ ಲೋಬೋ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳಲಿದ್ದಾರೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಹಾಗೂ ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ:9844813560 ನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
Next Story





