ವಕ್ವಾಡಿ: ವಿದ್ಯಾರ್ಥಿಗಳಿಗೆ ಗುಡ್ಡಗಾಡು ಓಟ ಸ್ಪರ್ಧೆ

ಕುಂದಾಪುರ, ಜು.15: ವಕ್ವಾಡಿ ಸರಕಾರಿ ಪ್ರೌಢಶಾಲೆಯ ಧ್ಯಾನ್‌ಚಂದ್ ಕ್ರೀಡಾ ಸಂಘ, ಕುಂದಾಪುರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗುಡ್ಡಗಾಡು ಓಟ ಸ್ಪರ್ಧೆಯನ್ನು ವಕ್ವಾಡಿ ಸರಕಾರಿ ಪ್ರೌಢಶಾಲೆ ವಠಾರದಲ್ಲಿ ಶನಿವಾರ ಏರ್ಪಡಿಸಲಾಗಿತ್ತು.
ಬೀಜಾಡಿ ಕ್ಷೇತ್ರದ ಜಿಪಂ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಸ್ಪರ್ಧೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಳವಾರ ಗ್ರಾಪಂ ಅಧ್ಯಕ್ಷ ರವಿರಾಜ್ ಶೆಟ್ಟಿ, ನಿವೃತ್ತ ಗ್ರಾಮ ಲೆಕ್ಕಿಗ ನಾರಾಯಣ ಶೆಟ್ಟಿ, ಉದ್ಯಮಿಗಳಾದ ರಘರಾಮ ಶೆಟ್ಟಿ, ಆನಂದ ಆಚಾರ್ಯ, ಮಲಾಡಿ ರಾಜು ಶೆಟ್ಟಿ, ಶ್ಯಾಮ್ ರಾಜ್ ಶೆಟ್ಟಿ ವಕ್ವಾಡಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯಕ್ ಶುಭಹಾರೈಸಿದರು.
ಕುಂದಾಪುರ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ, ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಯಾಡಿ ಸದಾರಾಮ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಉಪಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಮಾಜಿ ಅಧ್ಯಕ್ಷ ಕರುಣಾಕರ ಶೆಟ್ಟಿ, ಮಾಜಿ ಕೋಶಾಧಿಕಾರಿ ಅಂಪಾರು ಬಾಲಕೃಷ್ಣ ಶೆಟ್ಟಿ, ವಕ್ವಾಡಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಭಾರತಿ ಎನ್., ನಿವೃತ್ತ ಶಿಕ್ಷಕ ದಿನಕರ ಶೆಟ್ಟಿ, ಕಿಶೋರ ವಕ್ವಾಡಿ, ಕುಂದಾಪುರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕೋಶಾಧಿಕಾರಿ ಜಯಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.







