Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕಿಸ್ತಾನಕ್ಕೆ ರಕ್ಷಣಾ ನೆರವು: ಕಠಿಣ...

ಪಾಕಿಸ್ತಾನಕ್ಕೆ ರಕ್ಷಣಾ ನೆರವು: ಕಠಿಣ ಶರತ್ತು ವಿಧಿಸಿದ ಅಮೆರಿಕ ಸಂಸತ್ತು

ವಾರ್ತಾಭಾರತಿವಾರ್ತಾಭಾರತಿ15 July 2017 8:19 PM IST
share
ಪಾಕಿಸ್ತಾನಕ್ಕೆ ರಕ್ಷಣಾ ನೆರವು: ಕಠಿಣ ಶರತ್ತು ವಿಧಿಸಿದ ಅಮೆರಿಕ ಸಂಸತ್ತು

ವಾಶಿಂಗ್ಟನ್, ಜು. 15: ಪಾಕಿಸ್ತಾನಕ್ಕೆ ನೀಡುವ ರಕ್ಷಣಾ ಅನುದಾನದ ಅನುಮೋದನೆಗೆ ಕಠಿಣ ಶರತ್ತುಗಳನ್ನು ವಿಧಿಸುವ ಮೂರು ಶಾಸನ ತಿದ್ದುಪಡಿಗಳ ಪರವಾಗಿ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಮತ ಹಾಕಿದೆ. ಈ ತಿದ್ದುಪಡಿಗಳ ಪ್ರಕಾರ, ಪಾಕಿಸ್ತಾನವು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ತೃಪ್ತಿದಾಯಕ ಪ್ರಗತಿಯನ್ನು ತೋರಿಸುವುದು ಅಗತ್ಯವಾಗಿದೆ.

ಭಯೋತ್ಪಾದಕರು ಮತ್ತು ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನವು ನೀಡುತ್ತಿರುವ ಬೆಂಬಲದ ಹಿನ್ನೆಲೆಯಲ್ಲಿ ಈ ಶರತ್ತುಗಳನ್ನು ರೂಪಿಸಲಾಗಿದೆ. ಈ ಬಗ್ಗೆ ಅಮೆರಿಕದ ಹಲವಾರು ಉನ್ನತ ಅಧಿಕಾರಿಗಳು ಮತ್ತು ಸಂಸದರು ಈ ಹಿಂದೆ ಪದೇ ಪದೇ ಕಳವವಳ ವ್ಯಕ್ತಪಡಿಸಿದ್ದಾರೆ.

‘651 ಬಿಲಿಯ ಡಾಲರ್ ರಾಷ್ಟ್ರೀಯ ರಕ್ಷಣಾ ಅಂಗೀಕಾರ ಕಾಯ್ದೆ (ಎನ್‌ಡಿಎಎ), 2018’ಕ್ಕೆ ಸೂಚಿಸಲಾದ ಎಲ್ಲ ಮೂರು ಶಾಸನ ತಿದ್ದುಪಡಿಗಳನ್ನು ಅಮೆರಿಕ ಕಾಂಗ್ರೆಸ್‌ನ ಕೆಳಮನೆ ‘ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್’ ಶುಕ್ರವಾರ ಧ್ವನಿ ಮತದಿಂದ ಅಂಗೀಕರಿಸಿದೆ.

2017 ಅಕ್ಟೋಬರ್ 1ರಿಂದ ಆರಂಭಗೊಳ್ಳುವ ಹಣಕಾಸು ವರ್ಷಕ್ಕಾಗಿ, ವಾರ್ಷಿಕ ರಕ್ಷಣಾ ವೆಚ್ಚವನ್ನು ಅನುಮೋದಿಸುವ ಎನ್‌ಡಿಎಎ-2018 ಮಸೂದೆಯನ್ನು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ 344-81 ಮತಗಳ ಅಂತರದಿಂದ ಅಂಗೀಕರಿಸಿತು.

ಇನ್ನು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ನೆರವು ನೀಡಿರುವುದಕ್ಕಾಗಿ ಪಾಕಿಸ್ತಾನಕ್ಕೆ ಅನುದಾನ ನೀಡುವ ಮುನ್ನ, ಪಾಕಿಸ್ತಾನ ತನ್ನ ಕರ್ತವ್ಯಗಳನ್ನು ನಿರ್ವಹಿಸಿದೆ ಎಂಬುದಾಗಿ ರಕ್ಷಣಾ ಕಾರ್ಯದರ್ಶಿ ಪ್ರಮಾಣಪತ್ರ ನೀಡಬೇಕಾಗಿದೆ.

 ಪಾಕಿಸ್ತಾನದ ಮೂಲಕ ಹಾದು ಹೋಗುವ ಸಂವಹನ ಮಾರ್ಗದ ಉದ್ದಕ್ಕೂ ಪಾಕಿಸ್ತಾನ ಭದ್ರತೆ ಏರ್ಪಡಿಸಿದೆ ಹಾಗೂ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗಳಿಗೆ ಬೆಂಬಲವಾಗಿ ಹೇಳಿಕೊಳ್ಳಬಹುದಾದ ಕ್ರಮಗಳನ್ನು ತೆಗೆದುಕೊಂಡಿದೆ ಎಂಬುದನ್ನು ರಕ್ಷಣಾ ಕಾರ್ಯದರ್ಶಿ ತನ್ನ ಪ್ರಮಾಣಪತ್ರದಲ್ಲಿ ನಮೂದಿಸಬೇಕಾಗಿದೆ.

ಭಾರತದ ಜೊತೆಗಿನ ರಕ್ಷಣಾ ಸಹಕಾರಕ್ಕೆ ಅಸ್ತು

ಭಾರತದೊಂದಿಗೆ ರಕ್ಷಣಾ ಸಹಕಾರವನ್ನು ಹೆಚ್ಚಿಸುವ ಪ್ರಸ್ತಾಪವನ್ನು ಒಳಗೊಂಡ ತಿದ್ದುಪಡಿಯೊಂದನ್ನು ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್, ಎನ್‌ಡಿಎಎ-2018 ಮಸೂದೆಯೊಂದಿಗೆ ಅಂಗೀಕರಿಸಿದೆ.

ಭಾರತೀಯ ಅಮೆರಿಕನ್ ಸಂಸದ ಅಮಿ ಬೇರಾ ಮಂಡಿಸಿದ ತಿದ್ದುಪಡಿಯನ್ನು ಸದನವು ಧ್ವನಿಮತದಿಂದ ಅಂಗೀಕರಿಸಿತು.

ಈ ನಿರ್ಣಯದ ಪ್ರಕಾರ, ರಕ್ಷಣಾ ಕಾರ್ಯದರ್ಶಿಯು ವಿದೇಶ ಕಾರ್ಯದರ್ಶಿಯೊಂದಿಗೆ ಸಮಾಲೋಚಿಸಿ ಅಮೆರಿಕ ಮತ್ತು ಭಾರತಗಳ ನಡುವಿನ ರಕ್ಷಣಾ ಸಹಕಾರವನ್ನು ಮುಂದುವರಿಸುವುದಕ್ಕಾಗಿ ತಂತ್ರಗಾರಿಕೆಯೊಂದನ್ನು ರೂಪಿಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X