Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳದ ಘನಿ ಸಾಹೇಬ್‌ರ ಆದರ್ಶ...

ಭಟ್ಕಳದ ಘನಿ ಸಾಹೇಬ್‌ರ ಆದರ್ಶ ಮಾದರಿಯಾಗಲಿ:ಮೌಲಾನ ಇಲ್ಯಾಸ್ ನದ್ವಿ

ಮಂಗಳೂರು ಭಟ್ಕಳ ಜಮಾಅತ್‌ನಿಂದ 'ಈದ್ ಮಿಲನ್'

ವಾರ್ತಾಭಾರತಿವಾರ್ತಾಭಾರತಿ15 July 2017 10:15 PM IST
share
ಭಟ್ಕಳದ ಘನಿ ಸಾಹೇಬ್‌ರ ಆದರ್ಶ ಮಾದರಿಯಾಗಲಿ:ಮೌಲಾನ ಇಲ್ಯಾಸ್ ನದ್ವಿ

ಮಂಗಳೂರು, ಜು.15: ಸಮುದಾಯದ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದ ಭಟ್ಕಳದ ಹಿರಿಯ ನಾಯಕ ದಿವಂಗತ ಮೊಹ್ತಿಶಾಮ್ ಅಬ್ದುಲ್ ಘನಿ ಸಾಹೇಬ್ ಅವರ ಬದುಕು ಮತ್ತು ಆದರ್ಶ ಎಲ್ಲರಿಗೂ ಮಾದರಿಯಾಗಬೇಕು

ಎಂದು ಮೌಲಾನಾ ಅಲಿ ಮಿಯಾ ನದ್ವಿ ಇಸ್ಲಾಮಿಕ್ ಅಕಾಡಮಿಯ ಪ್ರಧಾನ ಕಾರ್ಯದರ್ಶಿ ಮೌಲಾನ ಇಲ್ಯಾಸ್ ನದ್ವಿ ಜಾಕ್ವಿ ಹೇಳಿದ್ದಾರೆ.

ಭಟ್ಕಳಿ ಜಮಾಅತುಲ್ ಮುಸ್ಲಿಮೀನ್ (ಬಿಜೆಎಂ) ಮಂಗಳೂರು ವತಿಯಿಂದ ಶನಿವಾರ ನಗರದ 

ಪ್ರೆಸ್ಟೀಜ್ ಸ್ಕೂಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ‘ಈದ್ ಮಿಲನ್-2017’ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಸಮುದಾಯಕ್ಕೆ ಘನಿ ಸಾಹೇಬ್ ಅವರ ಕೊಡುಗೆ ಅಪಾರವಾಗಿದೆ. ಧಾರ್ಮಿಕ, ಶೈಕ್ಷಣಿಕ ಸಹಿತ ವಿವಿಧ ಕ್ಷೇತ್ರಗಳಲ್ಲಿ

ಅವರು ಸಲ್ಲಿಸಿದ್ದ ನಿಸ್ವಾರ್ಥ ಸೇವೆಯು ಸಮುದಾಯದಲ್ಲಿನ ಪ್ರತಿಯೊಬ್ಬರಿಗೂ ಮಾದರಿಯಾಗಬೇಕು. ಯಾವುದೇ ಫಲಾಪೇಕ್ಷೆಗಳನ್ನು 

ಬಯಸದ ಅವರ ಸಮಾಜ ಸೇವೆಯನ್ನು ಭಟ್ಕಳದ ಜನರು ಇಂದಿಗೂ ಸ್ಮರಿಸುತ್ತಾರೆ. 

ಘನಿಸಾಹೇಬ್‌ರಂತಹ ಆದರ್ಶ ನಾಯಕರನ್ನು ಮುಂದಿನ ಪೀಳಿಗೆ ನೆನಪಿಟ್ಟುಕೊಳ್ಳುವಂತಹ ಯೋಜನೆ ರೂಪಿಸಬೇಕಿದೆ ಎಂದರು.

ಧಾರ್ಮಿಕ ಚೌಕಟ್ಟಿನೊಳಗೆ ಬದುಕು ಸಾಗಿಸುತ್ತಿದ್ದ ಅವರು, ಈ ವಿಷಯದಲ್ಲಿ ಯಾರೊಂದಿಗೂ ಹೊಂದಾಣಿಕೆ

ಮಾಡಿಕೊಳ್ಳುತ್ತಿರಲಿಲ್ಲ. ಧಾರ್ಮಿಕ ಶಿಕ್ಷಣದ ಜೊತೆಗೆ ಲೌಕಿಕ ಶಿಕ್ಷಣಕ್ಕೂ ಹೆಚ್ಚು ಒತ್ತು ನೀಡಿದ್ದರು. ಶಾಂತಿ ಮತ್ತು

ಸಹಬಾಳ್ವೆಗೆ ಒತ್ತು ನೀಡುತ್ತಿದ್ದ ಅವರು, ಸಮುದಾಯದಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿ ಎಲ್ಲರನ್ನೂ ವಿಶ್ವಾಸಕ್ಕೆ

ತೆಗೆದುಕೊಂಡು ಅದಕ್ಕೆ ಪರಿಹಾರ ಕಂಡುಕೊಳ್ಳುತ್ತಿದ್ದರು. ಅವರೊಂದಿಗೆ ಮಾತನಾಡಲು ಕುಳಿತುಕೊಂಡರೆ ಅವರ

ಪ್ರಾಮಾಣಿಕತೆ ಮತ್ತು ನಿಸ್ವಾರ್ಥ ಸೇವೆಯ ಮನೋಭಾವವನ್ನು ಸುಲಭದಲ್ಲಿ ತಿಳಿಯಬಹುದಾಗಿತ್ತು ಎಂದು

ಘನಿಸಾಹೇಬ್‌ರ ಒಡನಾಟವನ್ನು ಸ್ಮರಿಸುತ್ತಾ ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಜೆಎಂನ ಅಧ್ಯಕ್ಷ ಎಸ್.ಎಂ.ಅರ್ಶದ್ ಮಾತನಾಡಿ, ಕಳೆದ ಹಲವು ವರ್ಷಗಳಿಂದ

ಬಿಜೆಎಂ ವಿವಿಧ ರೀತಿಯಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಈ ಬಾರಿ ಘನಿ ಸಾಹೇಬರ ಸ್ಮರಣಾರ್ಥ

ಶೈಕ್ಷಣಿಕ ಪುರಸ್ಕಾರ ನೀಡುವ ಯೋಜನೆ ಪ್ರಾರಂಭಿಸಲಾಗಿದೆ ಎಂದರು.

ಮಜ್ಲಿಸೆ ಇಸ್ತಾಹ್ ವ ತಂಝೀಮ್‌ನ ಅಧ್ಯಕ್ಷ ಮುಝಮ್ಮಿಲ್ ಖಾಝಿಯಾ, ಬಿಜೆಎಂನ ಪ್ರಧಾನ ಕಾರ್ಯದರ್ಶಿ

ಇಮ್ತಿಯಾಝ್ ದಾಮ್ದ, ಉಪಾಧ್ಯಕ್ಷ ಅನ್ಸಾರ್ ಮುಸ್ಬಾ, ಬಿಜೆಎಂನ ಮಾಜಿ ಅಧ್ಯಕ್ಷ ಅಬ್ದುರ್ರಹ್ಮಾನ್ ಮೊಹ್ತಿಶಾಮ್,

ಭಟ್ಕಳದ ಅಂಜುಮನ್ ಹಾಮಿಯೆ ಮುಸ್ಲಿಮೀನ್‌ನ ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಸಿದ್ದೀಖಿ, ಶಾಸಕಮೊಯ್ದಿನ್ ಬಾವ ಉಪಸ್ಥಿತರಿದ್ದರು. 

‘ಈದ್ ಮಿಲನ್ 2017’ ಇದರ ಸಂಚಾಲಕ ಆಫ್ತಾಬ್ ಹುಸೈನ್ ಕೋಲ ಸ್ವಾಗತಿಸಿದರು. ಅಬ್ದುರ್ರಹ್ಮಾನ್ ಕಿರಾಅತ್

ಪಠಿಸಿದರು. ಮುಹಮ್ಮದ್ ಇಬ್ರಾಹೀಂ ಅನುವಾದಿಸಿದರು.
ಬಿಜೆಎಂ ಕಾರ್ಯದರ್ಶಿ ತಲ್ಹಾ ಅಕ್ರಮಿ ವಂದಿಸಿದರು. ಸಾಹಿಲ್ ಕಾರ್ಯಕ್ರಮ ನಿರೂಪಿಸಿದರು.

ನಗರದಲ್ಲಿ ಸೇವೆ ಸಲ್ಲಿಸುತ್ತಿರುವ ಭಟ್ಕಳ ಮೂಲದ ವೈದ್ಯರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X