ಬೈಕ್ ಸ್ಕಿಡ್: ಸವಾರ ಮೃತ್ಯು
ಬ್ರಹ್ಮಾವರ, ಜು.15: ಚೇರ್ಕಾಡಿ ಗ್ರಾಮದ ಮುಂಡ್ಕಿನ್ಜೆಡ್ಡು ಆಂಗ್ಲ ಮಾಧ್ಯಮ ಶಾಲೆಯ ಎದುರು ಜು.14ರಂದು ರಾತ್ರಿ 8.45ರ ಸುಮಾರಿಗೆ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕರ್ಜೆ ಶಾಲೆಯ ಗುಮಾಸ್ತ ಮಹೇಶ್ ಎಂದು ಗುರುತಿಸಲಾಗಿದೆ. ಇವರು ಬ್ರಹ್ಮಾವರ ಕಡೆಯಿಂದ ಬ್ರಹ್ಮಾವರ-ಹೆಬ್ರಿ ಮುಖ್ಯ ರಸ್ತೆಯಲ್ಲಿ ಪೇತ್ರಿ ಕಡೆಗೆ ಹೋಗುತ್ತಿದ್ದಾಗ ಬೈಕ್ ಸ್ಕೀಡ್ ಆಗಿ ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆ ಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಮಹೇಶ್ ಬ್ರಹ್ಮಾವರ ಆಸ್ಪತ್ರೆಗೆ ಕರೆತರುವಾಗ ದಾರಿ ಮಧ್ಯದಲ್ಲಿ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





