Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊನ್ನಾವರ:‘ನಾಗರಿಕ ಸೇವೆ ಗಗನ...

ಹೊನ್ನಾವರ:‘ನಾಗರಿಕ ಸೇವೆ ಗಗನ ಕುಸುಮವಲ್ಲ’ ಸಂವಾದ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ16 July 2017 5:12 PM IST
share
ಹೊನ್ನಾವರ:‘ನಾಗರಿಕ ಸೇವೆ ಗಗನ ಕುಸುಮವಲ್ಲ’ ಸಂವಾದ ಕಾರ್ಯಕ್ರಮ

ಹೊನ್ನಾವರ, ಜು.16: ಯುವ ತಲೆಮಾರು ದೊಡ್ಡ ಕನಸನ್ನು ಇಟ್ಟಕೊಂಡು ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು ಎಂದು ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ. ಹೇಳಿದರು.

ಪಟ್ಟಣದ ಎಸ್‌ಡಿಎಂ ಕಾಲೇಜಿನಲ್ಲಿ ಜೆಡಿಎನ್ ಅಭಿಮಾನಿ ಬಳಗವು ಹೊನ್ನಾವರದ ಡ್ರೀಮ್ ಟೀಮ್, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಎಸ್‌ಡಿಎಂ ಕಾಲೇಜು ಇವುಗಳ ಸಹಯೋಗದಲ್ಲಿ ‘ನಾಗರಿಕ ಸೇವೆ ಗಗನ ಕುಸುಮವಲ್ಲ’ ಎಂಬ ಶೀರ್ಷಿಕೆಯಡಿ ನಾಗರಿಕ ಸೇವಾ ಆಕಾಂಕ್ಷಿಗಳಿಗಾಗಿ ಶನಿವಾರ ಏರ್ಪಡಿಸಲಾದ ಸಮಾಲೋಚನೆ, ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ನೀಡುತ್ತಿರುವ ಕರ್ನಾಟಕ ರಾಜ್ಯದಲ್ಲಿ ನಾಗರಿಕ ಸೇವಾ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಯನ್ನು ಕಾಣಬೇಕು. ಇದಕ್ಕೆ ಸೂಕ್ತ ವೇದಿಕೆಯೊದಗಿಸುತ್ತಿರುವ ಜೆಡಿಎನ್ ಅಭಿಮಾನಿ ಬಳಗ ಸಂಚಲನ ಮೂಡಿಸುವ ಕಾರ್ಯ ಮಾಡುತ್ತಿದೆ. ಭಟ್ಕಳದಲ್ಲಿ ಸೆ. 24 ರಂದು ಬೃಹತ್ ಕಾರ್ಯಾಗಾರ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ರೋಲ್ ಮಾಡೆಲ್ ಆಗಿ ಗುರುತಿಸಿಕೊಂಡಿರುವ ಸುಮಾರು 50 ಕ್ಕೂ ಹೆಚ್ಚು ಐಎಎಸ್, ಐಪಿಎಸ್, ಐಎಫ್‌ಎಸ್, ಐಆರ್‌ಎಸ್ ಅಧಿಕಾರಿಗಳು ಪಾಲ್ಗೊಂಡು ಮಾರ್ಗದರ್ಶನ ನೀಡಲಿದ್ದಾರೆ. ವಿದ್ಯಾರ್ಥಿಗಳು ಬಡತನವನ್ನು ಬದಿಗೊತ್ತಿ ಆತ್ಮವಿಶ್ವಾಸದಿಂದ ದೊಡ್ಡ ಗುರಿ ಇಟ್ಟುಕೊಂಡು ಮುನ್ನಡೆಯಬೇಕು ಎಂದರು.

ಕೇಂದ್ರ ಆದಾಯ ತೆರಿಗೆ ಉಪ ಆಯುಕ್ತೆ ಪರಿಣತಿ ಸುನಾಕರ್ ಮಾತನಾಡಿ, ಶೃದ್ಧೆ ಮತ್ತು ಆತ್ಮವಿಶ್ವಾಸದಿಂದ ಪಾಲ್ಗೊಳ್ಳುವಿಕೆಯು ಉನ್ನತ ಹುದ್ದೆಯನ್ನು ದೊರಕಿಸಿಕೊಡುವುದು. ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಕೇಂದ್ರ ಎಕ್ಸೈಜ್ ಉಪ ಆಯುಕ್ತ ರಾಘವೇಂದ್ರ ರಾಯ್ಕರ್ ಮಾತನಾಡಿ, ವ್ಯಕ್ತಿಗೆ ವಿದ್ಯೆ ಅಲಂಕರಿಸಲು ಯೋಗ್ಯತೆ ಇದೆ ಎನ್ನುವ ಬಗ್ಗೆ ಗಂಭೀರವಾಗಿ 3 ಹಂತದಲ್ಲಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದ್ದೇವೆ. ಎಲ್ಲರಿಗೂ ನ್ಯಾಯ ಒದಗಿಸುವುದೇ ನಾಗರೀಕ ಸೇವೆಯಾಗಿದೆ ಎಂದರು.

ಎಸ್‌ಡಿಎಂ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಹೆಗಡೆ ಮಾತನಾಡಿ, ಕಾರ್ಯಾಗಾರದ ಮೂಲಕ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕನಸನ್ನು ಬಿತ್ತಿ ಯಶಸ್ಸಿನ ದಡ ಸೇರಿಸುವ ಲಕ್ಷಣಗಳು ಕಾಣುತ್ತಿದೆ ಎಂದ ಅವರು ತಾಲೂಕಿನ ವಿದ್ಯಾರ್ಥಿಗಳಿಗೆ ಇಂಥ ಸೇವೆಯನ್ನು ಒದಗಿಸುತ್ತಿರುವದಕ್ಕೆ ಕಾಲೇಜಿನ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿದರು.

ಸಿಜಿಎಸ್‌ಟಿ ಉಪ ಆಯುಕ್ತ ರಾಜೀವ ಕಿತ್ತೂರು, ಬೆಂಗಳೂರಿನ ಆದಾಯ ತೆರಿಗೆ ಉಪ ಆಯುಕ್ತ ಸೌರಭ ನಾಯಕ, ದೆಹಲಿಯ ಕಸ್ಟಮ್ಸ್ ಉಪ ಆಯುಕ್ತ ಮನೀಷ್ ಚೌಧರಿ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಉನ್ನತ ಅಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಸಂವಾದ ನಡೆಸಿದರು.
ಕಾರ್ಯಾಗಾರವನ್ನು ಮಾಜಿ ಶಾಸಕ ಮತ್ತು ಎಂಪಿಇ ಸೋಸೈಟಿಯ ಅಧ್ಯಕ್ಷ ಡಾ. ಎಂ.ಪಿ. ಕರ್ಕಿ ಉದ್ಘಾಟಿಸಿದರು. ಜೆ.ಡಿ.ನಾಯ್ಕ ಅಭಿಮಾನಿ ಬಳಗದ ಅಧ್ಯಕ್ಷ ನಾಗೇಶ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ ಕ್ಲಬ್ ಅಧ್ಯಕ್ಷ ಡಿ.ಡಿ.ಮಡಿವಾಳ ಉಪಸ್ಥಿತರಿದ್ದರು. ಉದ್ಯಮಿ ಜಿ.ಜಿ. ಶಂಕರ ಪ್ರಾಸ್ತಾವಿಕ ಮಾತನಾಡಿದರು.ಸತ್ಯ ಜಾವಗಲ್ ಸ್ವಾಗತಿಸಿದರು. ರಾಜು ಮಾಳಗಿಮನೆ ವಂದಿಸಿದರು, ಪ್ರಶಾಂತ ಮೂಡಲಮನೆ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X