Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೊಲೀಸರಿಂದ ಯಡಿಯೂರಪ್ಪ ನಿವಾಸ ಶೋಧ

ಪೊಲೀಸರಿಂದ ಯಡಿಯೂರಪ್ಪ ನಿವಾಸ ಶೋಧ

ಈಶ್ವರಪ್ಪ ಆಪ್ತ ಸಹಾಯಕ ಅಪಹರಣ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ16 July 2017 6:04 PM IST
share
ಪೊಲೀಸರಿಂದ ಯಡಿಯೂರಪ್ಪ ನಿವಾಸ ಶೋಧ

ಬೆಂಗಳೂರು, ಜು.16: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣ ಸಂಬಂಧ ಇಲ್ಲಿನ ಮಹಾಲಕ್ಷ್ಮಿ ಲೇಔಟ್ ಠಾಣಾ ಪೊಲೀಸರು, ರವಿವಾರ ಬೆಳಗಿನಜಾವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಶೋಧ ನಡೆಸಿದ್ದಾರೆ.

ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣದಲ್ಲಿ ತಮ್ಮ ಸಂಬಂಧಿ ಎನ್. ಆರ್.ಸಂತೋಷ್ ಪಾತ್ರವಿದೆ ಎಂದು ಹೇಳಿ ರವಿವಾರ ಬೆಳಗಿಜಾವ 2ಗಂಟೆಯ ಸುಮಾರಿಗೆ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ನನ್ನ ಮನೆಗೆ ಬಂದು ತನಿಖೆ ನಡೆಸಿ ಸಂತೋಷ್‌ಗಾಗಿ ಶೋಧ ನಡೆಸಿದ್ದಾರೆ.ಮಹಾಲಕ್ಷ್ಮಿ ಲೇಔಟ್ ಉಪ ವಿಭಾಗದ ಎಸಿಪಿ ಬಡಿಗೇರ್ ನೇತೃತ್ವದ ಪೊಲೀಸರ ತಂಡ ಪರಿಶೀಲನೆ ನಡೆಸಿದ್ದು, ಸಂತೋಷ್ ಎಲ್ಲಿ ಅಂತ ಬಿಎಸ್‌ವೈ ಮನೆಯ ಭದ್ರತಾ ಸಿಬ್ಬಂದಿ ಬಳಿ ವಿಚಾರಿಸಿ, ಮನೆಯಲ್ಲಿ ಶೋಧ ನಡೆಸಿದ್ದಾರೆ. ಆತ ಇಲ್ಲದ ಕಾರಣ ವಾಪಾಸ್ಸು ತೆರಳಿದ್ದಾರೆ ಎಂದು ಗೊತ್ತಾಗಿದೆ.

ಆಯುಕ್ತರಿಗೆ ಬಿಎಸ್‌ವೈ ಪತ್ರ: ತಮ್ಮ ಮನೆಗೆ ಆಗಮಿಸಿ ಶೋಧ ನಡೆಸಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದು, ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಮಧ್ಯರಾತ್ರಿ ಬದಲು ಬೆಳಗ್ಗೆ ಬಂದು ತನಿಖೆ ನಡೆಸಬಹುದಿತ್ತು ಎಂದು ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಮಧ್ಯರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸುವ ಅಗತ್ಯ ಏನಿತ್ತು? ಕಳೆದ ಏಳೆಂಟು ವರ್ಷಗಳಿಂದ ಸಂತೋಷ್‌ನನ್ನು ನಾನು ಚೆನ್ನಾಗಿ ಬಲ್ಲೆ. ಆತ ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಆದರೂ, ಉದ್ದೇಶಪೂರ್ವಕವಾಗಿ ಆತನನ್ನು ಸಿಲುಕಿಸಲಾಗಿದೆ. ಈ ಮೂಲಕ ರಾಜಕೀಯ ವಿರೋಧಿಗಳಿಂದ ತಮ್ಮನ್ನು ಹಣಿಯುವ ಯತ್ನ ನಡೆದಿದೆ ಎಂದು ಯಡಿಯೂರಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅವಶ್ಯಕತೆ ಏನಿತ್ತು?: ರವಿವಾರ ಮುಂಜಾನೆ 2 ಗಂಟೆ ಹೊತ್ತಿಗೆ ನನ್ನ ಮನೆಗೆ ಬಂದು ತನಿಖೆ ನಡೆಸುವ ಅವಶ್ಯಕತೆ ಏನಿತ್ತು. ಸಂತೋಷ್ ನನ್ನ ಮನೆಯಲ್ಲಿ ಇಲ್ಲ ಎನ್ನುವುದು ಗೊತ್ತಿದ್ದರೂ, ಬಂದು ಪರಿಶೀಲಿಸುವ ಯತ್ನ ಏನಿತ್ತು? ಈ ವಿಚಾರ ಪ್ರಸ್ತಾಪಿಸಲು ತಮ್ಮ ದೂರವಾಣಿ ಸಂಖ್ಯೆಗೆ ಕರೆ ಮಾಡಿದೆ. ಆದರೆ ಸಾಧ್ಯವಾಗಲಿಲ್ಲ. ಇದಾದ ನಂತರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಜತೆ ಚರ್ಚಿಸಿದ್ದೇನೆ. ತಮಗೆ ಈ ಮೂಲಕ ಮಾಹಿತಿ ತಲುಪಿಸುತ್ತಿದ್ದೇನೆ ಎಂದು ಪತ್ರದಲ್ಲಿ ಯಡಿಯೂರಪ್ಪ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X