‘ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳಲ್ಲಿ ಹುರುಪು ಹೆಚ್ಚಿಸಲಿ’

ಬೆಂಗಳೂರು, ಜು. 16: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಹೊಸ ಹುರುಪನ್ನು ಹುಟ್ಟಿಸುವ ಮೂಲಕ ಮುಂದಿನ ಪರೀಕ್ಷೆಗಳಲ್ಲಿ ಇನ್ನೂ ಹೆಚ್ಚಿನ ಗುರಿಯನ್ನು ಮುಟ್ಟುವತ್ತ ಪ್ರೇರೇಪಿಸಬೇಕು ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆಶಯವನ್ನು ವ್ಯಕ್ತಪಡಿಸಿದ್ದಾರೆ.
ರವಿವಾರ ನಗರದ ಯಶವಂತಪುರದಲ್ಲಿ ಏರ್ಪಡಿಸಿದ ‘ವಿಪ್ರ ಪ್ರಕಾಶ’ ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.60ಕ್ಕೂ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದ ಬಳಿಕ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗೆ ಇಂತಹ ಕಾರ್ಯಕ್ರಮಗಳು ಅಗತ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಕಾಶ್ ಅಯ್ಯಂಗಾರ್ ಮಾತನಾಡಿ, ಸಮಾಜದ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗೆ ಮಲ್ಲೇಶ್ವರಂ ಬ್ರಾಹ್ಮಣ ಸಭಾ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
Next Story





