Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹವಾಯಿ ನ್ಯಾಯಾಲಯದ ತೀರ್ಪು ಪ್ರಶ್ನಿಸಿ...

ಹವಾಯಿ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟ್ರಂಪ್ ಸರಕಾರ ಸುಪ್ರೀಂ ಕೋರ್ಟ್‌ಗೆ

ವಾರ್ತಾಭಾರತಿವಾರ್ತಾಭಾರತಿ16 July 2017 10:35 PM IST
share
ಹವಾಯಿ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟ್ರಂಪ್ ಸರಕಾರ ಸುಪ್ರೀಂ ಕೋರ್ಟ್‌ಗೆ

ವಾಶಿಂಗ್ಟನ್, ಜು. 16: ಆರು ಮುಸ್ಲಿಮ್ ಬಾಹುಳ್ಯದ ದೇಶಗಳ ನಿವಾಸಿಗಳಿಗೆ ವಿಧಿಸಿರುವ ತಾತ್ಕಾಲಿಕ ಅಮೆರಿಕ ಪ್ರವೇಶ ನಿರ್ಬಂಧದಿಂದ ವಿನಾಯಿತಿಗೊಳಗಾಗುವವರ ಪಟ್ಟಿಯನ್ನು ವಿಸ್ತರಿಸುವ ಹವಾಯಿಯ ಫೆಡರಲ್ ನ್ಯಾಯಾಲಯವೊಂದರ ತೀರ್ಪನ್ನು ಪ್ರಶ್ನಿಸಿ ಡೊನಾಲ್ಡ್ ಟ್ರಂಪ್ ಆಡಳಿತ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಹವಾಯಿ ನ್ಯಾಯಾಲಯವು ನಿರ್ಬಂಧದಿಂದ ವಿನಾಯಿತಿಗೊಳಗಾದವರ ಪಟ್ಟಿಗೆ ಅಜ್ಜ-ಅಜ್ಜಿಯರು, ಭಾವ-ಅತ್ತಿಗೆಯಂದಿರುವ, ಸೋದರ ಸಂಬಂಧಿಗಳು, ಸೋದರಳಿಯಂದಿರು-ಸೋದರ ಸೊಸೆಯಂದಿರು, ಸೋದರ ಮಾವಂದಿರು, ಸೋದರ ಅತ್ತೆಯಂದಿರು, ಚಿಕ್ಕಪ್ಪಂದಿರು, ಚಿಕ್ಕಮ್ಮಂದಿರನ್ನು ಸೇರಿಸಿದೆ ಹಾಗೂ ಅಮೆರಿಕದಲ್ಲಿ ಈಗಾಗಲೇ ಪುನರ್ವಸತಿ ಸಂಸ್ಥೆಯೊಂದರ ಜೊತೆ ಕೆಲಸ ಮಾಡುತ್ತಿರುವ ನಿರಾಶ್ರಿತರ ಪ್ರವೇಶಕ್ಕೆ ಅನುಮತಿ ನೀಡಿದೆ.

 ಹವಾಯಿ ನ್ಯಾಯಾಲಯದ ಆದೇಶವು ಕೇವಲ ‘ಆಪ್ತ’ ಸಂಬಂಧಿಕರನ್ನಲ್ಲ, ಕುಟುಂಬದ ಎಲ್ಲ ಸದಸ್ಯರನ್ನು ನಿರ್ಬಂಧ ವಿನಾಯಿತಿ ಪಟ್ಟಿಗೆ ಸೇರಿಸಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ಕಾನೂನು ಇಲಾಖೆ ಹೇಳಿದೆ.

ಜೂನ್ 26ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಟ್ರಂಪ್ ಆದೇಶದ ಕೆಲವು ಭಾಗಗಳ ಅನುಷ್ಠಾನಕ್ಕೆ ಅನುಮತಿ ನೀಡಿತ್ತು ಹಾಗೂ ಅಮೆರಿಕದಲ್ಲಿ ವಾಸಿಸುತ್ತಿರುವ ಜನರ ಸಂಬಂಧಿಕರು ನಿಷೇಧಿತ ದೇಶಗಳಲ್ಲಿದ್ದರೆ, ‘ಆಪ್ತ’ ಸಂಬಂಧಿಕರಿಗೆ ಅಮೆರಿಕ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಸೂಚಿಸಿತ್ತು.

ಆಪ್ತ ಕುಟುಂಬ ಸದಸ್ಯರ ಪಟ್ಟಿಯನ್ನು ತಯಾರಿಸುವ ಹೊಣೆಯನ್ನು ಅದು ಸರಕಾರಕ್ಕೆ ವಹಿಸಿತ್ತು.

ಟ್ರಂಪ್ ಸರಕಾರವು ಹೆತ್ತವರು, ಮಕ್ಕಳು, ಸಹೋದರ-ಸಹೋದರಿಯರು, ಅಳಿಯಂದಿರು, ಸೊಸೆಯಂದಿರು, ಪ್ರಿಯತಮ-ಪ್ರಿಯತಮೆಯಂದಿರು ಮತ್ತು ಮಲಮಕ್ಕಳನ್ನು ಒಳಗೊಂಡ ಸೀಮಿತ ವಿನಾಯಿತಿ ಪಟ್ಟಿಯೊಂದನ್ನು ಸಿದ್ಧಪಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X