ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರ. ಕಾರ್ಯದರ್ಶಿಯಾಗಿ ಪಿ.ವಿ. ಮೋಹನ್ ನೇಮಕ
ಮಂಗಳೂರು, ಜು.17: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಎಐಸಿಸಿ ಸದಸ್ಯ ಪಿ.ವಿ. ಮೋಹನ್ ನೇಮಕಗೊಂಡಿದ್ದಾರೆ.
ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕರಾಗಿ ಗುರುತಿಸಿಕೊಂಡ ಪಿ.ವಿ.ಮೋಹನ್, ಎಸ್.ಎಸ್.ಯು.ಐ. ಮೂಲಕ ರಾಜ್ಯ ಯುವ ಕಾಂಗ್ರೆಸ್ನ ಕಾರ್ಯದರ್ಶಿ, ಉಳ್ಳಾಲ ಮತ್ತು ದಕ್ಷಿಣ ಬ್ಲಾಕ್ನ ಕಾರ್ಯಕಾರಿ ಸಮಿತಿಯ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ, ಲಕ್ಷದ್ವೀಪದ ಕಾಂಗ್ರೆಸ್ ಪಕ್ಷದ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ, ಸೆನೆಟ್ ಹಾಗೂ ಸಿಂಡಿಕೇಟ್ ಸದಸ್ಯ, ಕೇಂದ್ರದ ಕನಿಷ್ಟ ವೇತನಾ ಸಲಹಾ ಮಂಡಳಿಯ ಸದಸ್ಯ ಮತ್ತು ದಕ್ಷಿಣ ವಲಯ ರೈಲ್ವೆ ಸಲಹಾ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.
Next Story