ಪಾರ್ಕ್‌ನಲ್ಲಿಯೇ ನೇಣುಬಿಗಿದು ಆತ್ಮಹತ್ಯೆ

ಬೆಂಗಳೂರು, ಜು.17: ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ವ್ಯಕ್ತಿಯೊಬ್ಬ ಉದ್ಯಾನವನದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕೊಡಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನಂದಿನಿಲೇಔಟ್ ನಿವಾಸಿ ಮರಿಸ್ವಾಮಿ(54) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಚಾಲಕ ವೃತ್ತಿ ಮಾಡುತ್ತಿದ್ದ ಮರಿಸ್ವಾಮಿ, ರವಿವಾರ ರಾತ್ರಿ ಮನೆಯೊಂದರ ಸಮೀಪದ ಉದ್ಯಾನವನಕ್ಕೆ ತೆರಳಿ ಜಾರಬಂಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿದ ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಶವವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.
Next Story





