ಕಾರು ಪಲ್ಟಿ: ಓರ್ವ ಮೃತ್ಯು, ಮೂವರಿಗೆ ಗಾಯ
ಕಾಪು, ಜು.17: ಮೂಳೂರು ಎಸ್.ಎಂ.ನರ್ಸರಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ರಾತ್ರಿ 10:30ರ ಸುಮಾರಿಗೆ ಕಾರೊಂದು ಪಲ್ಟಿಯಾಗಿ ಒಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಮೃತರನ್ನು ಕೇರಳ ರಾಜ್ಯದ ಮಲ್ಲಪುರಂ ಜಿಲ್ಲೆಯ ಪಲತ್ತಿಲ್ ನಿವಾಸಿ ವೇಲು ಇ.ಕೆ(61) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ರಾಧಾಮಣಿ, ದೇವಯಾನಿ, ರೋಹಿಣಿ ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಕೊಲ್ಲೂರು ಹಾಗೂ ಮುರ್ಡೇಶ್ವರ ದೇವಸ್ಥಾನಗಳಿಗೆ ತೆರಳಿ ಮರಳಿ ಕೇರಳಕ್ಕೆ ಹೋಗುತ್ತಿದ್ದಾಗ ಕಾರು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಯಿ ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೇಲು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





