ವರ್ಗಾವಣೆ ತಡೆ ಕೋರಿ ಅರ್ಜಿ ಸಲ್ಲಿಸಿದ ಮುಖ್ಯ ಪೇದೆ : ಜು.25ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು, ಜು.17: ಬೆಂಗಳೂರಿನಿಂದ ಕೇರಳಕ್ಕೆ ತಮ್ಮನ್ನು ವರ್ಗಾವಣೆ ಮಾಡಿರುವ ಆದೇಶ ರದ್ದುಕೋರಿ ಸಿಐಎಸ್‌ಎಫ್ ಮಹಿಳಾ ಮುಖ್ಯಪೇದೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜು.25ಕ್ಕೆ ಮುಂದೂಡಿದೆ.
ಈ ಸಂಬಂಧ ಸಿಐಎಸ್‌ಎಫ್ ಮುಖ್ಯಪೇದೆ ಶಿವಮ್ಮ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್. ಚವ್ಹಾಣ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ಅರ್ಜಿದಾರರ ಪರ ವಾದಿಸಿದ ವಕೀಲ ಎಚ್.ಎಸ್.ಪ್ರಶಾಂತ್ ಅವರು, ಶಿವಮ್ಮ ಅವರ ತಾಯಿಯ ಅನಾರೋಗ್ಯ ಹಾಗೂ ಮಗನ ವಿದ್ಯಾಭ್ಯಾಸದ ಹಿನ್ನೆಲೆಯಲ್ಲಿ ವರ್ಗಾವಣೆ ಆದೇಶವನ್ನು ರದ್ದುಪಡಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಜು.25ಕ್ಕೆ ಮುಂದೂಡಿ ಆದೇಶಿಸಿತು.
Next Story







