ಜೂಜಾಟ: ಐವರ ಬಂಧನ
ಬೆಂಗಳೂರು, ಜು.18: ಮನೆಯೊಂದರಲ್ಲಿ ಹಣ ಪಣವಾಗಿಟ್ಟುಕೊಂಡು ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಐವರನ್ನು ಬಂಧಿಸಿ 1 ಲಕ್ಷ ರೂ. ವಶಕ್ಕೆ ಪಡೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ನಿವಾಸಿಗಳಾದ ಹನುಮಂತ(43), ಮೋಹನ(47), ಜಯಕಾಂತ(40), ರಮೇಶ್ (39) ಹಾಗೂ ಮಹೇಶ (41) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ವಿಜಯನಗರದ ಸಂಪಿಗೆ ಬಡಾವಣೆ 10ನೇ ಕ್ರಾಸ್‌ನ ಮನೆಯೊಂದರಲ್ಲಿ ಕೆಲವರು ಹಣ ಪಣವಾಗಿಟ್ಟುಕೊಂಡು ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.
Next Story





