ಅಪಘಾತ: ಯುವಕ ಮೃತ್ಯು
ಬೆಂಗಳೂರು, ಜು.18: ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಯಶವಂತಪುರದ ಸಚಿನ್(23) ಮೃತಪಟ್ಟ ಯುವಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇತ್ತೀಚಿಗಷ್ಟೇ ಬಿಸಿಎ ಪದವಿ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದ ಸಚಿನ್‌ನನ್ನು ಸ್ನೇಹಿತರು ಲಗ್ಗರೆಯಲ್ಲಿ ಸೋಮವಾರ ಸಂಜೆ ನಡೆದ ಕಾರ್ಯಕರ್ತರ ಸಭೆಗೆ ಕರೆದಿದ್ದರು. ಸಭೆ ಮುಗಿಸಿಕೊಂಡು ರಾತ್ರಿ 8:15ರ ವೇಳೆ ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ನಂದಿನಿ ಲೇಔಟ್ ಬಸ್‌ನಿಲ್ದಾಣದ ಬಳಿ ಡಾ.ರಾಜ್‌ಕುಮಾರ್ ಸಮಾಧಿ ಮುಂಭಾಗ ಲಾರಿಯೊಂದು ಹಿಂದಿನಿಂದ ಬೈಕ್‌ಗೆ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಕರಣ ಸಂಬಂಧ ಲಾರಿ ಚಾಲಕನ್ನು ಬಂಧಿಸಿ ರಾಜಾಜಿನಗರ ಸಂಚಾರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





