ಸಂತೆಕಟ್ಟೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಉಡುಪಿ, ಜು.18: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಎನ್‌ಸಿಸಿ ಹಾಗೂ ಸಂತೆಕಟ್ಟೆ ಅಟೋರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ಸಂಯುಕ್ತ ಆಶ್ರಯದಲ್ಲಿ ವನ ಮಹೋತ್ಸವ ಕಾರ್ಯಕ್ರಮವನ್ನು ಇತ್ತೀಚೆಗೆ ಸಂತೆಕಟ್ಟೆಯ ರಿಕ್ಷಾ ನಿಲ್ದಾಣದಲ್ಲಿ ಹಮ್ಮಿಕೊಳ್ಳ ಲಾಗಿತ್ತು.
ಕಾರ್ಯಕ್ರಮವನ್ನು ಜಿಪಂ ಸದಸ್ಯ ಜನಾರ್ಧನ ತೋನ್ಸೆ ಉದ್ಘಾಟಿಸಿದರು. ಮಿಲಾಗ್ರಿಸ್ ಕಾಲೇಜಿನ ಸಂಚಾಲಕ ವಂ.ಫಾ.ಸ್ಟಾನಿ ಬಿ.ಲೋಬೋ, ಪ್ರಾಂಶು ಪಾಲ ಡಾ.ವಿನ್ಸೆಂಟ್ ಆಳ್ವ, ಅಟೋ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘದ ಗೌರವಾಧ್ಯಕ್ಷ ಶೇಖರ್ ಬೈಕಾಡಿ, ಅಧ್ಯಕ್ಷ ಜುರಾಮ್ ಮುಖ್ಯ ಅತಿಥಿ ಗಳಾಗಿದ್ದರು.
ಈ ಸಂದರ್ಭದಲ್ಲಿ ಹಿರಿಯ ರಿಕ್ಷಾ ಚಾಲಕ ಸುಂದರ ಜತ್ತನ್ನ ಅವರನ್ನು ಸನ್ಮಾನಿಸಲಾಯಿತು. ಎನ್‌ಸಿಸಿ ಅಧಿಕಾರಿ ಮರ್ವಿನ್ ಡಿಸೋಜ, ಎನ್ನೆಸ್ಸೆಸ್ ಅಧಿಕಾರಿಗಳಾದ ರವಿನಂದನ್, ಅನುಪಮಾ ಮೊದಲಾದವರು ಉಪಸ್ಥಿತರಿ ದ್ದರು. ಅನುಷ ಸ್ವಾಗತಿಸಿದರು. ಸಿಂಧುಜ ವಂದಿಸಿದರು. ನಿತೀಶ್ ಕಾರ್ಯಕ್ರಮ ನಿರೂಪಿಸಿದರು.
Next Story





