‘ಭಡ್ತಿ ಮೀಸಲಾತಿ’ ಸಂರಕ್ಷಣೆಗೆ ಸುಗ್ರೀವಾಜ್ಞೆ ಹೊರಡಿಸಲು ಒತ್ತಾಯ
ಬೆಂಗಳೂರು, ಜು. 18: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಭಡ್ತಿ ಮೀಸಲಾತಿ ಸಂರಕ್ಷಿಸಲು ಕೂಡಲೇ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿಯ ರಾಜ್ಯಾಧ್ಯಕ್ಷ ಡಿ.ಶಿವಶಂಕರ್ ಆಗ್ರಹಿಸಿದ್ದಾರೆ.
2017ರ ಫೆಬ್ರವರಿ 9ರ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ರಾಜ್ಯ ಸರಕಾರ ಕೂಡಲೇ ಸಂವಿಧಾನ ಪೀಠಕ್ಕೆ ಮೇಲ್ಮನವಿ ಸಲ್ಲಿಸಬೇಕು. ಲೋಕಸಭೆಯಲ್ಲಿ ನನೆಗುದಿಗೆ ಬಿದ್ದಿರುವ ಸಂವಿಧಾನದ 117ನೆ ತಿದ್ದುಪಡಿಯನ್ನು ಕಾರ್ಯರೂಪಕ್ಕೆ ತರಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಕೋರಲಾಗಿದೆ.
ಶಿಕ್ಷಣ, ಉದ್ಯೋಗ ಮತ್ತು ಮುಂಭಡ್ತಿಯಲ್ಲಿ ಮೀಸಲಾತಿ ಕಲ್ಪಿಸಲು ಸಂವಿಧಾನದ ಅನುಚ್ಛೇದ-9ರಲ್ಲಿ ಸೇರಿಸಬೇಕು. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಮೀಸಲಾತಿ ಅನುಸರಿಸಬೇಕು. 2011ರ ಜನಗಣತಿಯನ್ನು ಆಧರಿಸಿ ಮೀಸಲಾತಿ ನಿಗದಿಪಡಿಸಬೇಕು. ಖಾಸಗಿ ಕ್ಷೇತ್ರದಲ್ಲಿಯೂ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸಬೇಕೆಂದು ಸಮಿತಿ, ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದೆ.
Next Story





