Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುನ್ನೂರು: ಗ್ರಾಮಸಭೆ

ಮುನ್ನೂರು: ಗ್ರಾಮಸಭೆ

ವಾರ್ತಾಭಾರತಿವಾರ್ತಾಭಾರತಿ18 July 2017 8:05 PM IST
share
  • ಮುನ್ನೂರು: ಗ್ರಾಮಸಭೆ
  • ಮುನ್ನೂರು: ಗ್ರಾಮಸಭೆ

ಕೊಣಾಜೆ, ಜು. 18: ಮುನ್ನೂರು ಗ್ರಾಮ ಪಂಚಾಯತ್‌ನ 2017-18ನೇ ಸಾಲಿನ ಮೊದಲ ಗ್ರಾಮ ಸಭೆಯು ಗ್ರಾಮಪಂಚಾಯತ್‌ನ ಸಮುದಾಯ ಭವನದಲ್ಲಿ ಮಂಗಳವಾರ  ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ ಅವರು ಮುನ್ನೂರು ಗ್ರಾಮ ಪಂಚಾಯತ್‌ನ ಭಂಢಾರ ಬೈಲಿನಲ್ಲಿ ಆರಂಭ ಗೊಂಡಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ದೊಡ್ಡ ಪ್ರಮಾಣದ ಕಸವನ್ನು ವಿಲೇವಾರಿ ನಡೆಸಲು ಸ್ಥಳಾವಕಾಶದ ಕೊರತೆಯಿದ್ದು ಗ್ರಾಮಸ್ಥರು ಇದಕ್ಕೆ ಸಹಕರಿಸಿ ಪ್ಲಾಸ್ಟಿಕ್ ತ್ಯಾಜ್ಯವನ್ನು ವಾರಕ್ಕೊಮ್ಮೆ ಕಸ ವಿಲೇವಾರಿ ವಾಹನಕ್ಕೆ ನೀಡಬೇಕೆಂದು ಹೇಳಿದರು.

ಕಳೆದ ಗ್ರಾಮಸಭೆಯಲ್ಲೂ ಗ್ರಾಮದಲ್ಲಿ ಕಾಡುತ್ತಿದ್ದ ಜಟಿಲ ಸಮಸ್ಯೆಯಾದ ಕಸವಿಲೇವಾರಿ ಬಗ್ಗೆ ಎಲ್ಲರೂ ಒಕ್ಕೊರಳಿಂದ ಧ್ವನಿಯೆತ್ತಿದ್ದೆವು.ಎಲ್ಲರ ಬೇಡಿಕೆಯನ್ವಯ ಗ್ರಾಮದ ಭಂಡಾರ ಬೈಲಿನಲ್ಲಿ ಕಸ ವಿಲೇವಾರಿ ಘಟಕವು ಕಾರ್ಯಾರಂಭ ನಡೆಸಿದ್ದು ಎಲ್ಲರಿಗೂ ಸಂತಸದ ವಿಚಾರವಾಗಿದೆ. ಘಟಕವು ಸಣ್ಣದಾಗಿರುವುದರಿಂದ ಗ್ರಾಮದ ಎಲ್ಲಾ ಕಸವನ್ನು ವಿಲೇವಾರಿ ನಡೆಸಲು ಕಷ್ಟ ಸಾಧ್ಯವಾಗಿದ್ದು, ಕಸ ವಿಲೇವಾರಿಯ ಗುತ್ತಿಗೆ ನೀಡುವ ಟೆಂಡರು ಪ್ರಕ್ರಿಯೆ ಪ್ರಗತಿಯಲ್ಲಿದ್ದು ಎಲ್ಲರ ಸಹಕಾರದೊಂದಿಗೆ ಮುನ್ನೂರು ಗ್ರಾಮವನ್ನು ಸ್ವಚ್ಚ ಮಾದರಿ ಗ್ರಾಮವನ್ನಾಗಿಸೋಣ ಎಂದು ಕರೆ ನೀಡಿದರು.

ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಿಂದ ಸಿಗುವಂತಹ ಯೋಜನೆಗಳ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಮುನ್ನೂರು ಗ್ರಾ.ಪಂ ಅಧ್ಯಕ್ಷೆ ರೂಪಾ ಆರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಕ್ಷೇತ್ರ ಸಮನ್ವಯಾಧಿಕಾರಿ ದುರ್ಗಾಲತಾ ಅವರು ನೋಡಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ತಾ.ಪಂ ಸದಸ್ಯೆ ವಿಲ್ಮಾ ಡಿಸೋಜಾ, ಗ್ರಾ.ಪಂ ಉಪಾಧ್ಯಕ್ಷ ಹರೀಶ್ ಭಂಡಾರಮನೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಜನಿ ಡಿ ಮೊದಲಾದವರು ಉಪಸ್ಥಿತರಿದ್ದರು.

ಜನಸ್ನೇಹಿ ಸಂವಾದ ನಡೆಸಿ:

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಶಾಂತಿ ಕದಡುವ ದುಷ್ಕೃತ್ಯಗಳು ನಡೆಯುತ್ತಲೇ ಇವೆ.ಅದರಲ್ಲೂ ಮುನ್ನೂರು, ನೆರೆಯ ಅಂಬ್ಲಮೊಗರು ಗ್ರಾಮದಲ್ಲಿ ಎರಡು ಬಾರಿ ಇರಿತ ಪ್ರಕರಣಗಳು ನಡೆದಿದ್ದು ಪ್ರದೇಶದ ಜನರನ್ನು ಆತಂಕಕ್ಕೀಡು ಮಾಡಿದೆ. ಗ್ರಾಮಗಳಲ್ಲಿ ಎಲ್ಲಾ ಧರ್ಮದವರು ಪರಸ್ಪರ ಸಮನ್ವಯತೆಯಿಂದಿರುವ ನಿಟ್ಟಿನಲ್ಲಿ ಉಳ್ಳಾಲ ಪೊಲೀಸರು ಆದಷ್ಟು ಬೇಗನೆ ಜನಸ್ನೇಹಿ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಜಿ.ಪಂ ಸದಸ್ಯೆ ಧನಲಕ್ಷ್ಮೀ ಗಟ್ಟಿಯವರು ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದರು.

ತೆಂಗಿನ ಮರಗಳ ರಕ್ಷಣೆಗೆ ಮುಂಜಾಗ್ರತಾ ಕ್ರಮ ಇಲ್ಲವೇ:

ಈಗಾಗಲೇ ಉಳ್ಳಾಲ, ತೊಕ್ಕೊಟ್ಟು,ಕಲ್ಲಾಪು ಪ್ರದೇಶಗಳ ತೆಂಗಿನ ಮರಗಳು ಕಪ್ಪು ತಲೆ ಹುಳಗಳ ಭಾಧೆಯಿಂದ ಸಂಪೂರ್ಣ ನಶಿಸಿ ಹೋಗಿದ್ದು, ರೋಗವು ನಮ್ಮ ಗ್ರಾಮಕ್ಕೆ ಹರಡದಂತೆ ಏನಾದರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೀರ ಎಂದು ತೆಂಗು ಬೆಳೆಗಾರರಾದ ಬಾಬು ಶೆಟ್ಟಿಯವರು ತೋಟಗಾರಿಕಾ ಇಲಾಖಾಧಿಕಾರಿಯನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಯು ಕಲ್ಲಾಪು, ತೊಕ್ಕೊಟ್ಟು ಪ್ರದೇಶದ ಸಂತ್ರಸ್ಥರಿಗೆ ತೆಂಗು ಬೆಳೆ ಪುನಶ್ಚೇತನ ಸ್ಕೀಮಿನಡಿ ಪರಿಹಾರ ನೀಡುತ್ತಿದ್ದು, ಮುನ್ನೂರು ಗ್ರಾಮಕ್ಕೆ ರೋಗ ಭಾಧಿಸದಂತೆ ಮರಗಳಿಗೆ ಪರೋಪ ಜೀವಿ ಹುಳುಗಳನ್ನು ಬಿಡಲಾಗುವುದು. ಸದ್ಯ ಪರೋಪ ಜೀವಿಗಳ ಉತ್ಪತ್ತಿಯಿಲ್ಲದಿರುವುದರಿಂದ ಮಳೆಗಾಲ ಕಳೆದ ನಂತರ ತೆಂಗು ಬೆಳೆಗಾರರಿಗೆ ಪರೋಪ ಜೀವಿ ಹುಳಗಳನ್ನು ನೀಡಲಾಗುವುದೆಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X