ಕ್ಯಾಮೆರಾ ಟೆಕ್ನಿನಿಶಿಯನ್ ಆತ್ಮಹತ್ಯೆ
ಉಡುಪಿ, ಜು.18: ಕೇರಳದ ಕ್ಯಾಮೆರಾ ಟೆಕ್ನಿನಿಯಶನ್ ಒಬ್ಬರು ಉಡುಪಿಯ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.17ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಕೇರಳ ಪಾಲಕ್ಕಡ್‌ನ ಶಿವಕುಮಾರ್(36) ಎಂದು ಗುರುತಿಸಲಾಗಿದೆ. ಇವರು ಕಳೆದ ಹಲವು ವರ್ಷಗಳಿಂದ ಉಡುಪಿಯಲ್ಲಿ ಕ್ಯಾಮೆರಾ ಟೆಕ್ನಿನಿಶಿಯನ್ ಆಗಿ ಕೆಲಸ ಮಾಡುತ್ತಿದ್ದು ನಗರದ ಕಲ್ಪನಾ ಲಾಡ್ಜ್‌ನಲ್ಲಿ ವಾಸ ಮಾಡಿಕೊಂಡಿದ್ದರು.
ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇವರು ಜೀವನದಲ್ಲಿ ಜಿಗುಪ್ಸೆ ಗೊಂಡು ಲಾಡ್ಜ್‌ನ ರೂಮಿನ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





