Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಂಪು ಹಿಂಸೆಗೆ ಪ್ರತ್ಯೇಕ ಕಾನೂನು ಇಲ್ಲ:...

ಗುಂಪು ಹಿಂಸೆಗೆ ಪ್ರತ್ಯೇಕ ಕಾನೂನು ಇಲ್ಲ: ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ19 July 2017 10:00 PM IST
share
ಗುಂಪು ಹಿಂಸೆಗೆ ಪ್ರತ್ಯೇಕ ಕಾನೂನು ಇಲ್ಲ: ಕೇಂದ್ರ ಸರಕಾರ

ಹೊಸದಿಲ್ಲಿ, ಜು. 19: ಗೋರಕ್ಷಣೆ ಹೆಸರಲ್ಲಿ ನಡೆಯುವ ಹತ್ಯೆಯಂತಹ ಘಟನೆಗಳನ್ನು ಹತ್ತಿಕ್ಕಲು ರಾಜ್ಯ ಸರಕಾರಕ್ಕೆ ಸಂಪೂಪೂರ್ಣ ಅಧಿಕಾರವಿದೆ. ಈಗಿರುವ ಕಾನೂನನ್ನು ಬದಲಾಯಿಸುವ ಅಗತ್ಯ ಇಲ್ಲ ಎಂದು ಕೇಂದ್ರ ಸರಕಾರ ಹೇಳಿರುವುದು ಬುಧವಾರ ರಾಜ್ಯಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು.

ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಹತ್ಯೆ ತಡೆಯಲು ಕೈಗೊಂಡಿರುವ ಕ್ರಮಗಳ ಬಗೆಗಿನ ಪ್ರಶ್ನೆಗೆ ಕೇಂದ್ರದ ಉತ್ತರಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಸಮಾಜವಾದಿ ಪಕ್ಷದ ಸದಸ್ಯರು ಸದನದ ಭಾವಿಗಿಳಿದು ಘೋಷಣೆಗಳನ್ನು ಕೂಗಿದರು. ಪಶ್ನೋತ್ತರ ವೇಳೆಯಲ್ಲಿ ಸದನವನ್ನು 10 ನಿಮಿಷಗಳ ಮುಂದೂಡಲು ಇದು ಕಾರಣವಾಯಿತು. ಅನಂತರ ಅಧ್ಯಕ್ಷ ಹಾಮಿದ್ ಅನ್ಸಾರಿ, ಇತರ ಸದಸ್ಯರು ಪ್ರಶ್ನೆ ಕೇಳಲು ಅವಕಾಶ ಮಾಡಿಕೊಡಬೇಕು ಎಂದು ಎಸ್‌ಪಿ ಸದಸ್ಯರನ್ನು ಆಗ್ರಹಿಸಿದರು.

ಹತ್ಯೆಯಲ್ಲಿ ಹಿನ್ನೆಲೆಯಲ್ಲಿ ಬಿಜೆಪಿಯವರು ಇದ್ದಾರೆ ಎಂಬ ಎಸ್ಪಿ ಸದಸ್ಯ ನರೇಶ್ ಅಗ್ರವಾಲ್ ಅವರ ಆರೋಪವನ್ನು ತಳ್ಳಿಹಾಕಿದ ಗೃಹ ವ್ಯವಹಾರಗಳ ರಾಜ್ಯ ಸಚಿವ ಹನ್ಸ್‌ರಾಜ್ ಗಾಂಗಾರಾಮ್ ಅಹಿರ್, ಇಂತಹ ಘಟನೆಗಳ ಹಿಂದಿರುವವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಸಂಪೂರ್ಣ ಅಧಿಕಾರವಿದೆ ಎಂದರು.

 ಇಂತಹ ಹಿಂಸಾತ್ಮಕ ಘಟನೆಗಳ ಬಗ್ಗೆ ಕೂಡಲೇ ಪ್ರಥಮ ಮಾಹಿತಿ ವರದಿ ದಾಖಲಿಸಬೇಕು ಹಾಗೂ ಇದರಲ್ಲಿ ಭಾಗಿಯಾದವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಈಗಾಗಲೇ ಎಲ್ಲ ರಾಜ್ಯಗಳಿಗೆ ಸಲಹೆ ನೀಡಲಾಗಿದೆ. ಗೋರಕ್ಷಣೆ ಹೆಸರಲ್ಲಿ ಇಂತಹ ಹತ್ಯೆಗಳನ್ನು ಸಹಿಸಲಾಗದು ಎಂದು ಪ್ರಧಾನಿ ಅವರು ಈಗಾಗಲೇ ಹೇಳಿದ್ದಾರೆ ಎಂದು ಅವರು ತಿಳಿಸಿದರು.

 ಇಂತಹ ಹಿಂಸಾಚಾರ ಹತ್ತಿಕ್ಕಲು ಈಗಿರುವ ಕಾನೂನಿನಲ್ಲಿ ಬದಲಾವಣೆ ತರುವ ಉದ್ದೇಶ ಕೇಂದ್ರ ಸರಕಾರಕ್ಕೆ ಇದೆಯೇ ಎಂಬ ಕಾಂಗ್ರೆಸ್ ಸದಸ್ಯ ದಿಗ್ವಿಜಯ್ ಸಿಂಗ್ ಪ್ರಶ್ನೆಗೆ ಉತ್ತರಿಸಿದ ಅವರು, ಈಗಿರುವ ಕಾನೂನಿಗೆ ಬದಲಾವಣೆ ತರಬೇಕು ಎಂದು ನನಗೆ ಅನಿಸುತ್ತಿಲ್ಲ ಎಂದರು.

  ಎನ್‌ಸಿಆರ್‌ಬಿ ಕೋಮು ಹಾಗೂ ಧಾರ್ಮಿಕ ಹಿಂಸಾಚಾರಗಳಿಗೆ ಸಂಬಂಧಿಸಿದ ಪ್ರಕರಣಗಳ ದಾಖಲೆಯನ್ನು ಮಾತ್ರ ನಿರ್ವಹಿಸುತ್ತಿದೆ. ಗುಂಪು ಹತ್ಯೆಗೆ ಸಂಬಂಧಿಸಿದ ಪ್ರತ್ಯೇಕ ಅಂಕಿ-ಅಂಶಗಳನ್ನು ನಿರ್ವಹಿಸುತ್ತಿಲ್ಲ ಎಂದು ಅವರು ಹೇಳಿದರು.

 ಗುಂಪು ಹಿಂಸೆಯಲ್ಲಿ ಸಂಘ ಪರಿವಾರ ಸದಸ್ಯರು ಭಾಗಿ

 ಹೊಸದಿಲ್ಲಿ: ಇತ್ತೀಚೆಗಿನ ಗುಂಪು ಹತ್ಯೆ ಬಗ್ಗೆ ಕೇಂದ್ರ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಅಝಾದ್, ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಗುಂಪು ಹತ್ಯೆಯಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರದ ಸದಸ್ಯರು ಭಾಗಿಯಾಗಿದ್ದಾರೆ ಎಂದಿದ್ದಾರೆ.

ಈ ಹಿಂದೆ ಕೂಡ ಗುಂಪು ಹತ್ಯೆ ನಡೆಯುತ್ತಿತ್ತು. ಆದರೆ, ಇಂದು ಗುಂಪು ಹತ್ಯೆಯ ಘಟನೆಗಳಲ್ಲಿ ಆಡಳಿತಾರೂಢ ಪಕ್ಷ ಹಾಗೂ ಸಂಘ ಪರಿವಾರದ ಸದಸ್ಯರು ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

 ದುಷ್ಕರ್ಮಿಗಳ ಜೊತೆ ಸರಕಾರ ಕೈಜೋಡಿಸಿದೆ ಎಂದು ಆರೋಪಿಸಿರುವ ಅಝಾದ್, ದುಷ್ಕರ್ಮಿಗಳು ಬೇಕಾದಂತೆ ದುಷ್ಕೃತ್ಯಗಳಲ್ಲಿ ತೊಡಗಲು ಕೇಂದ್ರ ಸರಕಾರ ಅವಕಾಶ ನೀಡಿದೆ. ನಿಮಗೆ ಹೇಗೆ ಬೇಕೋ ಹಾಗೆ ದುಷ್ಕೃತ್ಯದಲ್ಲಿ ತೊಡಗಿ. ನಾವು ಹೇಳಿಕೆ ನೀಡುತ್ತೇವೆ ಎಂದು ಸರಕಾರ ದುಷ್ಕರ್ಮಿಗಳಿಗೆ ಭರವಸೆ ನೀಡಿದೆ. ಕೇಂದ್ರ ಸರಕಾರ ಹಾಗೂ ದುಷ್ಕರ್ಮಿಗಳ ನಡುವೆ ಹೊಂದಾಣಿಕೆ ಇಲ್ಲದೇ ಇರುತ್ತಿದ್ದರೆ, ಯಾರೊಬ್ಬರನ್ನೂ ಬಂಧಿಸಲು ಸಾಧ್ಯವಾಗುತ್ತಿಲ್ಲ ಏಕೆ ? ಎಂದು ಅವರು ಪ್ರಶ್ನಿಸಿದರು.

ಜಮ್ಮುಕಾಶ್ಮೀರದಲ್ಲಿ ಡಿಎಸ್ಪಿ ಅಯೂಬ್ ಪಂಡಿತ್ ಅವರನ್ನು ಥಳಿಸಿ ಹತ್ಯೆಗೈದ ಬಗ್ಗೆ ಪ್ರತಿಕ್ರಿಯಿಸಿದ ಅಝಾದ್, ಇದು ಅವಮಾನಕರು. ಇದು ಮಾನವತೆಗೆ ವಿರುದ್ಧವಾದುದು ಎಂದಿದ್ದಾರೆ.

ಭಾರತದ ಏಕತೆಗಾಗಿ ಪ್ರಾಣ ನೀಡಲು ವಿರೋಧ ಪಕ್ಷ ಸಿದ್ದವಿದೆ ಎಂದು ಘೋಷಿಸಿದ ಅಝಾದ್, ಇದು ಧರ್ಮಗಳ ನಡುವಿನ ಹೋರಾಟವಲ್ಲ, ಹಿಂದೂ ಹಾಗೂ ಮುಸ್ಲಿಮರ ನಡುವಿನ ಅಥವಾ ಮೇಲ್ಜಾತಿ ಹಾಗೂ ದಲಿತರ ನಡುವಿನ ಹೋರಾಟವಲ್ಲ. ಇದು ದೇಶಕ್ಕಾಗಿ ಹೋರಾಟ, ಮಾನವತೆಗಾಗಿ ಹೋರಾಟ. ಮತಕ್ಕಾಗಿ ದೇಶವನ್ನು ವಿಭಜಿಸಬೇಡಿ ಎಂದರು.

ಅಝಾದ ಅವರ ಮಾತಿಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತರ್ ಅಬ್ಬಾಸ್ ನಕ್ವಿ, ವಿರೋಧ ಪಕ್ಷ ಇಂತಹ ಘಟನೆಗಳಿಗೆ ಧಾರ್ಮಿಕ ಬಣ್ಣ ನೀಡಬಾರದು ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X