Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಮಹಾದಾಯಿಗಾಗಿ ನಿರಂತರ ಹೋರಾಟ

ಮಹಾದಾಯಿಗಾಗಿ ನಿರಂತರ ಹೋರಾಟ

ವಾರ್ತಾಭಾರತಿವಾರ್ತಾಭಾರತಿ19 July 2017 11:39 PM IST
share
ಮಹಾದಾಯಿಗಾಗಿ ನಿರಂತರ ಹೋರಾಟ

ಕರ್ನಾಟಕದ ಜನರ ಸಮಸ್ಯೆಗಳ ಬಗ್ಗೆ ಕೇಂದ್ರದ ನರೇಂದ್ರ ಮೋದಿ ಸರಕಾರ ಎಷ್ಟು ನಿರ್ಲಕ್ಷ ಧೋರಣೆ ತಾಳಿದೆ ಎಂಬುದಕ್ಕೆ ಮಹಾದಾಯಿ ಯೋಜನೆಗಾಗಿ ಉತ್ತರಕರ್ನಾಟಕದ ಜನ ನಡೆಸಿದ ಹೋರಾಟವೇ ಒಂದು ಉದಾಹರಣೆಯಾಗಿದೆ. ಕರ್ನಾಟಕದ ಇತಿಹಾಸದಲ್ಲಿ ಏಕೀಕರಣಕ್ಕಾಗಿ ಮತ್ತು ಗೋಕಾಕ್ ವರದಿ ಜಾರಿಗಾಗಿ ನಡೆದ ಹೋರಾಟಗಳನ್ನು ಬಿಟ್ಟರೆ ಕುಡಿಯುವ ನೀರಿಗಾಗಿ ಇಷ್ಟೊಂದು ಸುದೀರ್ಘವಾದ ಹೋರಾಟ ಹಿಂದೆಂದೂ ನಡೆದಿರಲಿಲ್ಲ. ಉತ್ತರಕರ್ನಾಟಕದ ಅದರಲ್ಲೂ ಧಾರವಾಡ, ಬೆಳಗಾವಿ, ಬಿಜಾಪುರ ಜಿಲ್ಲೆಯ ಜನ ಮಹಾದಾಯಿ ಯೋಜನೆ ಜಾರಿಗಾಗಿ ಕಳೆದ 24 ತಿಂಗಳುಗಳಿಂದ ಹೋರಾಡುತ್ತಲೇ ಇದ್ದಾರೆ. ಈ ಯೋಜನೆ ಜಾರಿಯಾದರೆ ಆ ಭಾಗದ ಗದಗ, ಬಾಗಲಕೋಟೆ, ಧಾರವಾಡ, ಹಾವೇರಿ, ಬೆಳಗಾವಿ ಜಿಲ್ಲೆಗಳ ಜನರ ಬಾಯಾರಿಕೆಯನ್ನು ಇಂಗಿಸಬಹುದಾಗಿದೆ. ಮಹಾದಾಯಿ ನದಿ ಬೆಳಗಾವಿ ಜಿಲ್ಲೆಯ ಖಾನಪುರ ತಾಲೂಕಿನ ದೇವಗಾವುಡು ಗ್ರಾಮದ ಬಳಿ ಉಗಮವಾಗುತ್ತದೆ. ಕರ್ನಾಟಕದಲ್ಲಿ 35 ಕಿ.ಮೀ. ಹರಿದು ನಂತರ ಗೋವಾ ರಾಜ್ಯವನ್ನು ಪ್ರವೇಶಿಸುತ್ತದೆ. ಗೋವಾದಲ್ಲಿ ಇದನ್ನು ಮಾಂಡೋವಿ ನದಿ ಎಂದು ಕರೆಯುತ್ತಾರೆ. ಅಲ್ಲಿ ಸುಮಾರು 45 ಕಿ.ಮೀ. ಹರಿಯುತ್ತದೆ. ಮಹಾದಾಯಿ ನದಿ ಕಳಸಾ,ಬಂಡೂರಿ, ಹಲತರಾ, ಕಾರಜೋಳ, ಬೊಮ್ಮನರಿ, ಧೂದ್‌ಸಾಗರ ಹೀಗೆ ಅನೇಕ ಉಪನದಿಗಳಿಂದ ಕೂಡಿದ ನದಿ ಕಣಿವೆ ಇದು. ಇದು ಹೆಚ್ಚು ಮಳೆ ಬೀಳುವ ಪ್ರದೇಶವಾಗಿದೆ.

ಇಲ್ಲಿ ಸರಾಸರಿ 3,134 ಮಿ.ಮೀ. ಮಳೆಬೀಳುತ್ತದೆ. ಈ ಮಹಾದಾಯಿ ನದಿ ಕಣಿವೆಯಿಂದ ಮಲಪ್ರಭಾ ನದಿಗೆ ನೀರು ವರ್ಗಾಯಿಸುವುದೇ ಈ ಯೋಜನೆಯ ಉದ್ದೇಶ. ಆದರೆ, ಈ ಯೋಜನೆಯ ಜಾರಿಗಾಗಿ ಕರ್ನಾಟಕದ ಜನತೆ ಒಂದೆಡೆ ಹೋರಾಡುತ್ತಿದ್ದರೆ, ಇನ್ನೊಂದೆಡೆ ಗೋವಾದ ಬಿಜೆಪಿ ಸರಕಾರ ನಿರಂತರವಾಗಿ ಅಡ್ಡಿಯುಂಟು ಮಾಡುತ್ತಾ ಬಂದಿದೆ. ಮಹಾದಾಯಿ ನೀರಿನ ಕೊರತೆ ಅನುಭವಿಸುತ್ತಿರುವ ಒಂದು ಕಣಿವೆ ಪ್ರದೇಶ. ಹೀಗಾಗಿ ಇಲ್ಲಿ ಹರಿಯುವ ನೀರನ್ನು ವರ್ಗಾವಣೆ ಮಾಡಬಾರದು ಎಂದು ಗೋವಾ ಮತ್ತು ಮಹಾರಾಷ್ಟ್ರ ಸರಕಾರಗಳು ಆಕ್ಷೇಪ ವ್ಯಕ್ತಪಡಿಸುತ್ತಾ ಬಂದಿವೆ. ಇದರಿಂದಾಗಿ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯಕ್ಕೆ ಅದು ಕಳಸಾ-ಬಂಡೂರಿ ನಾಲೆಗಳ ಮೂಲಕ ಹರಿದು ಉತ್ತರಕರ್ನಾಟಕದ ಜನತೆಯ ಬಾಯಾರಿಕೆಯನ್ನು ಇಂಗಿಸುವ, ಒಣಗಿದ ಹೊಲಗಳಿಗೆ ತಂಪೆರೆಯುವ ಲಕ್ಷಣ ಕಾಣುತ್ತಿಲ್ಲ. ಈ ವಿವಾದ ದಿನದಿಂದ ದಿನಕ್ಕೆ ಕಗ್ಗ್ಗಂಟಾಗುತ್ತಿದೆ. ಮಹಾದಾಯಿ ನ್ಯಾಯಾಧಿಕರಣದ ಎರಡನೆಯ ಬಾರಿಯ ಅವಧಿ ಬರುವ ಆಗಸ್ಟ್ 16ಕ್ಕೆ ಕೊನೆಗೊಳ್ಳುತ್ತದೆ. ಆದರೆ, ಪರಿಹಾರ ಮಾತ್ರ ಗೋಚರವಾಗುತ್ತಿಲ್ಲ. ಈ ಭಾಗದ ಜನರ ಹೋರಾಟಕ್ಕೆ ಎರಡು ವರ್ಷ ತುಂಬಿದೆ. ಕಳೆದ ವರ್ಷ ಅದು ಉಗ್ರ ಸ್ವರೂಪ ತಾಳಿತ್ತು.


  ಮಹಾದಾಯಿ ನದಿಯಲ್ಲಿ ಕರ್ನಾಟಕದ ಪಾಲಿನ 52.60 ಟಿಎಂಸಿ ನೀರಿನಲ್ಲಿ ಕಳಸಾ ಬಂಡೂರಿ ಯೋಜನೆಗೆ ಅಗತ್ಯವಿರುವ ನೀರಿನ ಬಗ್ಗೆ ನ್ಯಾಯಾಧಿಕರಣದಲ್ಲಿ ಈಗಾಗಲೇ ಅಗತ್ಯ ದಾಖಲಾತಿ ಸಲ್ಲಿಸಲಾಗಿದೆ. ಆದರೂ ಕೂಡಾ ನ್ಯಾಯಾಧಿಕರಣದ ಎದುರು ಗೋವಾ ಸರಕಾರ ಹೊಸ ಬೇಡಿಕೆಗಳನ್ನು ಇಡುತ್ತಾ ಬಂದಿದೆ. ನ್ಯಾಯಾಧಿಕರಣದ ಅವಧಿ ಅತ್ಯಂತ ಕಡಿಮೆ ಇರುವುದರಿಂದ ನಿಗದಿತ ಅವಧಿಯಲ್ಲಿ ನ್ಯಾಯ ಸಿಗುತ್ತದೆ ಎಂಬ ಭರವಸೆ ರೈತರಿಗೆ ಇಲ್ಲ. ಈಗ ಉಳಿದಿರುವ ಏಕೈಕ ದಾರಿಯೆಂದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಧ್ಯಪ್ರವೇಶ. ಮೋದಿ ಅವರು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳ ಸಭೆ ಕರೆದು ತ್ರಿಪಕ್ಷೀಯ ಮಾತುಕತೆ ನಡೆಸಿದರೆ ಈ ಸಮಸ್ಯೆಯನ್ನು ಬಗೆಹರಿಸಬಹುದು. ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಇರುವುದು ಬಿಜೆಪಿ ಸರಕಾರ. ಹೀಗಾಗಿ ಸಮಸ್ಯೆ ಬಗೆಹರಿಸಲು ಅಂತಹ ತೊಂದರೆ ಉಂಟಾಗುವುದಿಲ್ಲ. ಆದರೆ, ಪ್ರಧಾನಿಯವರಿಗೆ ಆ ಸಮಸ್ಯೆ ಬಗೆಹರಿಯುವುದು ಬೇಕಾದಂತೆ ಕಾಣುವುದಿಲ್ಲ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ವರ್ಷ ರಾಜ್ಯದ ಸರ್ವಪಕ್ಷ ನಿಯೋಗವನ್ನು ಪ್ರಧಾನಿಯವರ ಬಳಿ ಕರೆದುಕೊಂಡು ಹೋಗಿದ್ದರು. ಆದರೆ, ಸರ್ವಪಕ್ಷಗಳ ನಿಯೋಗದಲ್ಲಿ ಹೋದ ಕರ್ನಾಟಕದ ಬಿಜೆಪಿ ನಾಯಕರು ಪ್ರಧಾನಿಯೆದುರು ಬಾಯಿಬಿಡಲಿಲ್ಲ. ಅವರು ಹೇಳಿದ್ದನ್ನು ಕೇಳಿಕೊಂಡು ಬಂದರು. ಪ್ರಧಾನಿಯವರ ವಿಚಿತ್ರ ವಾದ ಏನೆಂದರೆ ಮಹಾರಾಷ್ಟ್ರ ಮತ್ತು ಗೋವಾದ ವಿರೋಧ ಪಕ್ಷಗಳ ನಾಯಕರನ್ನು ಮಾತುಕತೆಗೆ ನೀವು ಕರೆದುಕೊಂಡು ಬಂದರೆ ನಾನು ಅಲ್ಲಿನ ಮುಖ್ಯಮಂತ್ರಿಗಳನ್ನು ಕರೆಸಿ ಮಾತನಾಡುತ್ತೇನೆ ಎಂದು ಹೇಳುತ್ತಾರೆ. ಈ ಹಿಂದೆ ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದಾಗ ಇಂತಹ ಸಂಧಾನ ಪ್ರಯತ್ನ ನಡೆದು ವಿಫಲಗೊಂಡಿದೆಯೆಂಬುದು ಗಮನಾರ್ಹ ಸಂಗತಿ.

ಈಗ ಮತ್ತೆ ಮಹಾದಾಯಿ ನದಿ ನೀರಿಗಾಗಿ ಧಾರವಾಡ ಜಿಲ್ಲೆಯಲ್ಲಿ ಹೋರಾಟ ತೀವ್ರಗೊಂಡಿದೆ. ಕಳೆದವರ್ಷ ಇಲ್ಲಿನ ರೈತರು ಹೋರಾಟಕ್ಕಿಳಿದಾಗ ಇಡೀ ಕರ್ನಾಟಕದ ಜನತೆ ಪ್ರಾದೇಶಿಕ ಭಿನ್ನತೆಯನ್ನು ಮರೆತು ಸ್ಪಂದಿಸಿದ್ದರು. ಆದರೂ ಕೂಡಾ ಕಾವೇರಿ ವಿಷಯದಲ್ಲಿ ತೋರಿಸುವ ಆಸಕ್ತಿಯನ್ನು ಮಹಾದಾಯಿ ವಿಷಯದಲ್ಲಿ ರಾಜ್ಯದ ಹಿರಿಯ ರಾಜಕಾರಣಿಗಳು ತೋರಿಸುತ್ತಿಲ್ಲ ಎಂಬ ಭಾವನೆ ಆ ಭಾಗದ ಜನರಲ್ಲಿ ಇದೆ. ಈಗ ಮತ್ತೆ ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗೆ ಪತ್ರ ಬರೆದು ಮಹಾದಾಯಿ ಸಮಸ್ಯೆಯನ್ನು ಬೇಗನೆ ಬಗೆಹರಿಸಬೇಕೆಂದು ಮನವಿ ಮಾಡಿದ್ದಾರೆ. ಈಗಲಾದರು ಪ್ರಧಾನಿ ಅವರು ಈ ಸಮಸ್ಯೆಗೆ ಸ್ಪಂದಿಸಬೇಕಾಗಿದೆ. ಕರ್ನಾಟಕದ ಬಿಜೆಪಿ ನಾಯಕರು ಪ್ರಧಾನಿಯವರ ಮೇಲೆ ಒತ್ತಡ ತರಬೇಕಾಗಿದೆ. 40 ವರ್ಷಗಳ ಹಿಂದೆಯೇ ಬಗೆಹರಿಯಬೇಕಿದ್ದ ಈ ಸಮಸ್ಯೆಯನ್ನು ಇಷ್ಟೊಂದು ಸುದೀರ್ಘ ಕಾಲ ಬಗೆಹರಿಸದೇ ಉಳಿಸಿದ್ದು, ಸರಿಯಲ್ಲ.
ಮುಂಬರುವ ದಿನಗಳಲ್ಲಿ ಮಹಾದಾಯಿ ನದಿ ನೀರಿಗಾಗಿ ನಡೆದಿರುವ ಹೋರಾಟ ಕೇವಲ ಧಾರವಾಡ ಜಿಲ್ಲೆಗೆ ಸೀಮಿತವಾಗಿ ಉಳಿಯುವುದಿಲ್ಲ. ಯೋಜನೆಯ ವ್ಯಾಪ್ತಿಯಲ್ಲಿ ಬರುವ ಜನಪ್ರತಿನಿಧಿಗಳ ರಾಜೀನಾಮೆಗೆ ಒತ್ತಾಯಿಸಿ ಅವರ ಮನೆಯ ಎದುರು ಧರಣಿ ಸತ್ಯಾಗ್ರಹ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಈಗಾಗಲೇ ಧಾರವಾಡದ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಅವರ ಮನೆಯ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಕೇಂದ್ರ ಸರಕಾರ ನ್ಯಾಯಾಧಿಕರಣದ ಅವಧಿಯನ್ನು 2018ರ ವರೆಗೆ ಮುಂದುವರಿಸಿದೆ. ಇನ್ನೊಂದು ವರ್ಷ ಇದರ ತೀರ್ಪಿಗಾಗಿ ನಾವು ಕಾಯಬೇಕಾಗಿದೆ. ಈಗಲಾದರೂ ಪ್ರಧಾನಿ ಮಧ್ಯ ಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕಾಗಿದೆ.

ಕಳೆದ ವರ್ಷ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮಹಾದಾಯಿ ಯೋಜನೆ ಕುರಿತು ನಾಲ್ಕು ದಿನಗಳ ಕಾಲ ಸುದೀರ್ಘ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ಸದಸ್ಯರು ಗಂಟೆಗಟ್ಟಲೆ ಮಾತನಾಡಿದರು. ಆದರೆ, ಸದನದಲ್ಲಿ ನಡೆದ ಚರ್ಚೆಯಿಂದ ಯಾವುದೇ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗಬೇಕೆಂಬ ನಿರ್ಣಯವನ್ನು ಅಂಗೀಕರಿಸಲಾಯಿತು. ಆದರೆ, ಬಿಜೆಪಿ ಅಡ್ಡಗಾಲು ಹಾಕಿರುವುದರಿಂದ ಅಧಿವೇಶನ ಮುಗಿದು 8 ತಿಂಗಳಾದರೂ ದಿಲ್ಲಿಗೆ ನಿಯೋಗ ಕೊಂಡೊಯ್ಯುವ ಬಗ್ಗೆ ಯಾವುದೇ ಬೆಳವಣಿಗೆ ಉಂಟಾಗಿಲ್ಲ. ಮುಂದಿನವರ್ಷ ವಿಧಾನಸಭೆ ಚುನಾವಣೆ ಇರುವುದರಿಂದ ಮತ್ತೆ ಮಹಾದಾಯಿ ಸುತ್ತಮುತ್ತ ರಾಜಕೀಯ ಪಕ್ಷಗಳ ನಡುವೆ ಪೈಪೋಟಿ ಆರಂಭವಾಗಿದೆ. ಬಿಜೆಪಿ ಏನೇ ಸಮರ್ಥಿಸಿಕೊಳ್ಳಲಿ ಮಹಾದಾಯಿ ಯೋಜನೆ ವಿಳಂಬವಾಗಲು ಕೇಂದ್ರ ಸರಕಾರದ ನಿರ್ಲಕ್ಷ ಧೋರಣೆಯೇ ಕಾರಣ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಪ್ರಧಾನಮಂತ್ರಿಗಳು ಈಗಲಾದರು ಮಹಾರಾಷ್ಟ್ರ, ಗೋವಾ ಮುಖ್ಯಮಂತ್ರಿಗಳ ಸಭೆ ಕರೆದು ಸಮಸ್ಯೆ ಇತ್ಯರ್ಥಕ್ಕಾಗಿ ಪ್ರಯತ್ನಿಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X