ಉಚಿತ ಆರೋಗ್ಯ ಶಿಬಿರ

ಸೊರಬ, ಜು.20: ಸಂಘ-ಸಂಸ್ಥೆಗಳು ಉಚಿತ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವದರಿಂದ ಸಾಮಾನ್ಯ ಜನರು ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಅನುಕೂಲವಾಗುತ್ತದೆ ಎಂದು ವೈದ್ಯಾಧಿಕಾರಿ ಡಾ. ಲೋಕೇಶ್ ನುಡಿದರು.
ಗುರುವಾರ ಪಟ್ಟಣದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸಮಾಜ ಸೇವಾ ವಿಭಾಗ ಹಾಗೂ ಸಾಗರ ಆಸ್ಪತ್ರೆ ಬೆಂಗಳೂರು ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಆರೋಗ್ಯ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಗ್ರಾಮೀಣ ಜನತೆ ಸಕಾಲದಲ್ಲಿ, ಹೃದಯ, ಕಿಡ್ನಿ ಸೇರಿದಂತೆ ಹಲವು ಕಾಯಿಲೆಗಳ ಬಗ್ಗೆ ಪರೀಕ್ಷೆ ಮಾಡಿಸಿಕೊಳ್ಳುವುದರಲ್ಲಿ ಹಿಂದುಳಿದಿದ್ದಾರೆ. ಸಮಾಜ ಸೇವೆಯಲ್ಲಿ ಆರೋಗ್ಯ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬರು ಆರೋಗ್ಯವನ್ನು ಕಾಪಾಡಿಕೊಳ್ಳುವ ದೃಷ್ಟಿಯಲ್ಲಿ ಉತ್ತಮ ಆಹಾರ ಹಾಗೂ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದರು.
ಚಿಕ್ಕಪೇಟೆ ರೇಡಿಯನ್ಸ್ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮುಹಮ್ಮದ್ ಯಾಸೀನ್ ಕಾರ್ಯಕ್ರಮ ಉದ್ಘಾಟಿಸಿದರು. ಜಮಾಅತೆ ಇಸ್ಲಾಮೀ ಹಿಂದ್ ಸಮಾಜ ಸೇವಾ ವಿಭಾಗದ ಅಧ್ಯಕ್ಷ ಎಂ.ಬಶೀರ್ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು. ಆರ್.ಅಬ್ದುಲ್ ರಶೀದ್ ಸ್ವಾಗತಿಸಿ, ಮುಹಮ್ಮದ್ ಶಹಾಬುದ್ದೀನ್ ನಿರೂಪಿಸಿದರು.





