Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರ್ಥಿಕ ಕೊರತೆ ಕಾರಣದಿಂದ ವಿದ್ಯಾರ್ಥಿಗಳ...

ಆರ್ಥಿಕ ಕೊರತೆ ಕಾರಣದಿಂದ ವಿದ್ಯಾರ್ಥಿಗಳ ಶಿಕ್ಷಣ ಮೊಟಕುಗೊಳ್ಳಬಾರದು: ಯು.ಟಿ.ಖಾದರ್

ಕೊಣಾಜೆ ಶಾಲೆಯಲ್ಲಿ ನೂತನ ಕ್ರೀಡಾಂಗಣ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 July 2017 6:59 PM IST
share
ಆರ್ಥಿಕ ಕೊರತೆ ಕಾರಣದಿಂದ ವಿದ್ಯಾರ್ಥಿಗಳ ಶಿಕ್ಷಣ ಮೊಟಕುಗೊಳ್ಳಬಾರದು: ಯು.ಟಿ.ಖಾದರ್

ಕೊಣಾಜೆ, ಜು. 20: ಆರ್ಥಿಕ ಕೊರತೆ ಎಂಬ ಕಾರಣದಿಂದಾಗಿ ಯಾವೊಬ್ಬ ವಿದ್ಯಾರ್ಥಿಯ ಶಿಕ್ಷಣವು ಮೊಟಕುಗೊಳ್ಳ ಬಾರದು. ಈ ನಿಟ್ಟಿನಲ್ಲಿ ಪೋಷಕರ ಜವಾಬ್ಧಾರಿಯೂ ಮಹತ್ತರವಾದುದು. ಅಲ್ಲದೆ ಸರಕಾರವೂ ಕೂಡಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವಾರು ಉಚಿತ ಕೊಡುಗೆಗಳನ್ನು ನೀಡಿ ಪ್ರೋತ್ಸಾಹಿಸುತ್ತಿದೆ. ವಿದ್ಯಾರ್ಥಿಗಳು ಉತ್ತಮ ವಿದ್ಯಾರ್ಜನೆಯ ಮೂಲಕ ಉತ್ತಮ ಪ್ರಜೆಯಾಗಿ ರೂಪಿತಗೊಂಡು ಬಲಿಷ್ಠರಾಷ್ಟ್ರ ನಿರ್ಮಾಣಕ್ಕೆ ಪಣ ತೊಡಬೇಕು ಎಂದು ಆಹಾರ ಸಚಿವ ಯು.ಟಿ.ಖಾದರ್ ಅವರು ಹೇಳಿದರು.

ಅವರು ಕೊಣಾಜೆಯ ಮಹಾತ್ಮಗಾಂಧಿ ಸರಕಾರಿ ಪ್ರೌಢಶಾಲೆಯಲ್ಲಿ ಬುಧವಾರ ನೂತನ ಕ್ರೀಡಾಂಗಣ ಉದ್ಘಾಟನೆ, ಸ್ಮಾರ್ಟ್‌ಕ್ಲಾಸ್, ಮಕ್ಕಳ ಮಾಸ ಪತ್ರಿಕೆ, ವಿದ್ಯಾರ್ಥಿ ಸಂಸತ್ತು ಉದ್ಘಾಟನೆ ಹಾಗೂ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಧಾರ್ಮಿಕ ಮತ್ತು ಲೌಕಿಕ ಶಿಕ್ಷಣದ ಗುರಿಯೇ ಒತ್ತಡ ಮುಕ್ತವಾಗಿ ನೆಮ್ಮದಿಯುತ ಜೀವನವನ್ನು ಕಂಡುಕೊಳ್ಳುವುದಾಗಿದೆ. ಆದ್ದರಿಂದ ಶಿಕ್ಷಣವು ನಮ್ಮ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಧುನಿಕ ಮೌಲ್ಯಗಳನ್ನು ಬೆಳೆಸಿಕೊಂಡು ಮುನ್ನಡೆಯಬೇಕು ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರು ವಿವಿ ಪರಿಕ್ಷಾಂಗ ಕುಲಸಚಿವ ಪ್ರೊ.ಎ.ಎಂ.ಖಾನ್ ಅವರು ಸಮಾಜದಲ್ಲಿ ಉತ್ತಮ ಶಿಕ್ಷಣದೊಂದಿಗೆ ಮಾದರಿ ಶಾಲೆಯ ನಿರ್ಮಾಣದ ಕೆಲಸ ಎಲ್ಲರ ಸಹಕಾರದಿಂದ ಆಗಬೇಕು. ಅಲ್ಲದೆ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮಂಗಳೂರು ವಿವಿಯು ಕೂಡಾ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಲಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಸತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಹಾಗೂ ಶಾಲೆಯ ಮಾಸ ಪತ್ರಿಕೆ ‘ಕಲ್ಪವೃಕ್ಷವನ್ನು ಉದ್ಘಾಟಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕೊಣಾಜೆ ಪಂಚಾಯಿತಿ ಅಧ್ಯಕ್ಷರಾದ ಶೌಕತ್ ಆಲಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು, ಪ್ರೊ.ರವೀಂದ್ರ, ಕಾಂಗ್ರೆಸ್ ಮುಖಂಡ ಸಂತೋಷ್ ಕುಮಾರ್ ಶೆಟ್ಟಿ, ಎನ್.ಎಸ್.ಕರೀಂ, ಜಬ್ಬಾರ್ ಬೋಳಿಯಾರ್, ಸ್ಥಳೀಯರಾದ ಪ್ರಸಾದ್ ರೈ ಕಲ್ಲಿಮಾರ್, ಮುತ್ತು ಶೆಟ್ಟಿ, ವೇದಾವತಿ ಗಟ್ಟಿ, ತಾಲೂಕು ಪಂಚಾಯಿತಿ ಸದಸ್ಯೆ ಪದ್ಮಾವತಿ, ರವೀಂದ್ರ ರೈ ಹರೇಕಳ, ಪಂಚಾಯತ್ ಸದಸ್ಯ ನಝರ್ ಷಾ, ಹರಿಶ್ಚಂದ್ರ, ಎಸ್‌ಡಿಎಂಸಿ ಅಧ್ಯಕ್ಷ ಅಬೂಬಕ್ಕರ್ ಸಖಾಫಿ, ಅಬ್ದುಲ್ ರಹಿಮಾನ್ ಕೋಡಿಜಾಲ್, ರಮೇಶ್ ಶೆಟ್ಟಿ, ನಾಸೀರ್ ನಡುಪದವು, ಅಬ್ದುಲ್ ರಹಿಮಾನ್, ಹಸೈನಾರ್ ಉಪಸ್ಥಿತರಿದ್ದರು.

ಪಂಚಾಯಿತಿ ಸದಸ್ಯ ಅಚ್ಯುತ ಗಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮೀನಾ ಗಾಂವ್ಕರ್ ಸ್ವಾಗತಿಸಿದರು. ದೈಹಿಕ ಶಿಕ್ಷಕ ರಾಜೀವ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X