Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಬೇಡ್ಕರ್ ಅವರ ಹೋರಾಟದ ಬದುಕು ಸದಾ...

ಅಂಬೇಡ್ಕರ್ ಅವರ ಹೋರಾಟದ ಬದುಕು ಸದಾ ಸ್ಮರಣೀಯ: ವಿಜು ಸುಬ್ರಮಣಿ ಅಭಿಪ್ರಾಯ

ಡಾ.ಬಿ.ಆರ್.ಅಂಬೇಡ್ಕರ್ ಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ20 July 2017 8:35 PM IST
share
ಅಂಬೇಡ್ಕರ್ ಅವರ ಹೋರಾಟದ ಬದುಕು ಸದಾ ಸ್ಮರಣೀಯ: ವಿಜು ಸುಬ್ರಮಣಿ ಅಭಿಪ್ರಾಯ

ಮಡಿಕೇರಿ, ಜು.20: ಸುಭದ್ರ ಭಾರತ ನಿರ್ಮಾಣಕ್ಕೆ ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳು, ದೂರದೃಷ್ಟಿ, ಮಾರ್ಗದರ್ಶನಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ.ಕೆ.ವಿಜು ಸುಬ್ರಮಣಿ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ವರ್ಷಾಚರಣೆ ಪ್ರಯುಕ್ತ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಗುರುವಾರ ನಡೆದ ತಮಗಿದೋ ನಮ್ಮ ಗೌರವ ನಮನ ಮೂರು ನುಡಿ-ನೂರು ದುಡಿ ನುಡಿ ನಮನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಧೀಮಂತ ನಾಯಕ. ಇವರ ಚಿಂತನೆಗಳು, ಸಮಾಜಕ್ಕೆ ನೀಡಿರುವ ಕೊಡುಗೆ ಸದಾ ಸ್ಮರಿಸುವಂತಾಗಬೇಕು ಎಂದು ವಿಜು ಸುಬ್ರಮಣಿ ಕರೆ ನೀಡಿದರು. ಅಂಬೇಡ್ಕರ್ ಅವರ ಹೋರಾಟದ ಬದುಕನ್ನು ಸದಾ ಸ್ಮರಿಸುವಂತಾಗಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅಂಬೇಡ್ಕರ್ ಅವರ ಜೀವನ, ಬದುಕು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ವಿಶ್ವದಲ್ಲಿಯೇ ಅತ್ಯಂತ ಪ್ರಬಲ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಪ್ರಪಂಚದಲ್ಲಿ ಪ್ರಸಿದ್ದ ಸಂವಿಧಾನ ರಚಿಸುವಲ್ಲಿ ಅಂಬೇಡ್ಕರ್ ಅವರ ಶ್ರಮ ದೊಡ್ಡದು ಎಂದರು.

ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಮಾಜದ ಬಡ ವರ್ಗದವರಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸದಾ ತುಡಿತ ಹೊಂದಿದ್ದರು ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ನೀಡಿರುವ ಕೊಡುಗೆಯನ್ನು ಸದಾ ಸ್ಮರಿಸಬೇಕು. ಇವರ ಕಾರ್ಯದಕ್ಷತೆ, ಹೋರಾಟದ ಬಗ್ಗೆ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಉಪನ್ಯಾಸಕರಾದ ಶ್ರೀಧರ ಹೆಗಡೆ ಮಾತನಾಡಿದರು. ನಗರಸಭೆ ಪೌರಾಯುಕ್ತರಾದ ಬಿ.ಶುಭ, ಪ್ರಮುಖರಾದ ಮುತ್ತಪ್ಪ, ಗಣೇಶ್, ದಿವಾಕರ್, ಆಹಾರ ಇಲಾಖೆ ಉಪ ನಿರ್ದೇಶಕರಾದ ಪುಟ್ಟಸ್ವಾಮಿ ಇತರರು ಹಾಜರಿದ್ದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಾಯಾದೇವಿ ಗಲಗಲಿ ಸ್ವಾಗತಿಸಿದರು. ರಾಜು ಮತ್ತು ತಂಡದವರು ನುಡಿ ನಮನ ಹಾಡು ಹಾಡಿದರು. ಚರ್ಮವಾದ್ಯ, ಹೋರಾಟದ ಹಾಡುಗಳು, ಜನಪದ ಕಲಾ ಕಾಂರ್ುಕ್ರಮ ಆಕರ್ಷಣೀಯವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X