Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. '6ನೇ ಮೈಲಿ' ಚಿತ್ರದ ಮೋಶನ್ ಪೋಸ್ಟರ್...

'6ನೇ ಮೈಲಿ' ಚಿತ್ರದ ಮೋಶನ್ ಪೋಸ್ಟರ್ ಬಿಡುಗಡೆ

ಶಶಿಕರ ಪಾತೂರುಶಶಿಕರ ಪಾತೂರು20 July 2017 11:41 PM IST
share
6ನೇ ಮೈಲಿ ಚಿತ್ರದ ಮೋಶನ್ ಪೋಸ್ಟರ್ ಬಿಡುಗಡೆ

ಸಂಚಾರಿ ವಿಜಯ್ ಪ್ರಧಾನ ಪಾತ್ರದಲ್ಲಿ ನಟಿಸಿರುವ 6ನೇ ಮೈಲಿ ಚಿತ್ರದ ಮೋಶನ್ ಪೋಸ್ಟರ್ ಗುರುವಾರ ಸಂಜೆ ಬಿಡುಗಡೆಗೊಳಿಸಲಾಯಿತು.

ಖ್ಯಾತ ಕಲಾವಿದರಾದ ವಸಿಷ್ಠ ಸಿಂಹ ಮತ್ತು  ಶ್ರುತಿ ಹರಿಹರನ್ ತಲಾ ಒಂದೊಂದು ಮೋಶನ್ ಪೋಸ್ಟರ್ ಗಳ‌ ಪ್ರದರ್ಶನಕ್ಕೆ ಚಾಲನೆ ನೀಡಿದರು.

ನಟಿ‌ ಶ್ರುತಿ ಹರಿಹರನ್ ಮಾತನಾಡುತ್ತಾ, "ಇದು ಪ್ರೀತಿಯಿಂದ ಚಿತ್ರ ಮಾಡುವ ಒಂದು ಒಳ್ಳೆಯ ತಂಡ. ಹಾಗೆಯೇ ಮೋಶನ್ ಪೋಸ್ಟರ್ ಕೂಡ ಇಷ್ಟವಾಯಿತು, ತಂಡದ ಶ್ರಮ ಎದ್ದು ಕಾಣ್ಸುತ್ತೆ. ಇನ್ನು ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಟನೆಯ ಬಗ್ಗೆ ಹೇಳುವುದೇ ಬೇಕಿಲ್ಲವಲ್ಲ" ಎಂದು ಸಂಭ್ರಮ ವ್ಯಕ್ತಪಡಿಸಿದರು.

ಮತ್ತೊಂದು ಮೋಶನ್ ಪೋಸ್ಟರ್ ಬಿಡುಗಡೆಗೊಳಿಸಿದ ನಟ ವಸಿಷ್ಠ ಸಿಂಹ, " ನಿರ್ದೇಶಕ ಸೀನಿ ನನ್ನ ಬಹುಕಾಲದ ಗೆಳೆಯ. ಕತೆ ಕೇಳಿದ ತಕ್ಷಣವೇ ಟೀಸರ್ ಗೆ ಧ್ವನಿ ನೀಡಲು ಒಪ್ಪಿದೆ" ಎಂದರು. ತಂಡದ ಎನರ್ಜಿ, ಸಾಯಿ ಕಿರಣ್ ಸಂಗೀತದ ಬಗ್ಗೆಯೂ ಅವರು ಮೆಚ್ಚುಗೆ ಸೂಚಿಸಿದರು.

ಚಿತ್ರದ ನಿರ್ದೇಶಕ ಸೀನಿಯವರು ಚಿತ್ರೀಕರಣದ ಅನುಭವವನ್ನು ಹಂಚಿಕೊಂಡರು. ಶಿರ್ಸಿ ಪಕ್ಕದ ಕಾಡಲ್ಲಿ 130ಜನ ಏಳು ದಿನ ಚಿತ್ರೀಕರಣವಿತ್ತು. ಅಕ್ಟೋಬರ್ ನಲ್ಲಿ ಬಿಡುಗಡೆ ಯೋಜನೆ ಹಾಕಲಾಗಿದೆ. ಒಂದು ಹಾಡಿನ ರೆಕಾರ್ಡಿಂಗನ್ನು ಲಂಡನ್ನಲ್ಲಿ ಮಾಡಲಿದ್ದೇವೆ. ಬಹುಶಃ ಕನ್ನಡದ ಮಟ್ಟಿಗೆ ಇದುವೇ ಪ್ರಥಮವಿರಬೇಕು ಎಂದರು. 

ವೃತ್ತಿಯಲ್ಲಿ ವೈದ್ಯರಾಗಿರುವ ಚಿತ್ರದ ನಿರ್ಮಾಪಕ
ಡಾ. ಬಿಎಸ್ ಶೈಲೇಶ್ ಕುಮಾರ್ ನಿರ್ದೇಶಕರಿಂದ ಪ್ರಥಮ ಬಾರಿಗೆ ಕತೆ ಕೇಳಿ, ಅದರ ಮಧ್ಯಂತರ ತಲುಪುತ್ತಿದ್ದಂತೆ ಚಿತ್ರ ಮಾಡುವುದಾಗಿ ನಿರ್ಧರಿಸಿದ್ದಾಗಿ ತಿಳಿಸಿದರು. ಆರ್ ಜೆ ನೇತ್ರಾ ಮಾತನಾಡಿ, "ಕತೆ, ಪಾತ್ರ ಇಷ್ಟವಾದ ಕಾರಣ ಒಪ್ಪಿದೆ. ಕಾಡಿನಲ್ಲಿನ ಚಿತ್ರೀಕರಣ ನಿಜಕ್ಕೂ ಛಾಲೆಂಜಿಂಗ್ ಆಗಿತ್ತು" ಎಂದು ನೆನಪಿಸಿಕೊಂಡರು. ನಾಯಕ ಸಂಚಾರಿ ವಿಜಯ್ "ಚಿತ್ರದ ಇಂಟರ್ವೆಲ್ ಬಳಿಕ ರಿವರ್ಸ್ ಸ್ಕ್ರೀನ್ ಪ್ಲೇ ಇದೆ.  ಅದೇ ಚಿತ್ರದ ಪ್ರಮುಖ ವಿಶೇಷತೆ" ಎಂದು ಅಭಿಪ್ರಾಯಪಟ್ಟರು. 
ಸಂಗೀತ ನಿರ್ದೇಶಕ ಸಾಯಿಕಿರಣ್, ಸಂಕಲನಕಾರ ಮಹೇಶ್ ಉಪಸ್ಥಿತರಿದ್ದರು. 

ಚಿತ್ರದಲ್ಲೊಂದು ಪಾತ್ರ ನಿರ್ವಹಿಸಿರುವ ರೇಡಿಯೋ‌ ಮಿರ್ಚಿಯ ಆರ್ ಜೆ ಸುಧೇಶ್ ಕಾರ್ಯಕ್ರಮ ನಿರೂಪಿಸಿದರು.

share
ಶಶಿಕರ ಪಾತೂರು
ಶಶಿಕರ ಪಾತೂರು
Next Story
X