ವಿಶ್ವಕರ್ಮ ವಿದ್ಯಾರ್ಥಿ ನಿಲಯ: ಅರ್ಜಿ ಆಹ್ವಾನ
ಉಡುಪಿ, ಜು.21: ಉಡುಪಿಯ ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ಉಡುಪಿ ಕುಂಜಿಬೆಟ್ಟಿನ ಗಾಯತ್ರಿ ಕಲ್ಯಾಣ ಮಂಟಪದ ಸಮೀಪದಲ್ಲಿರುವ ವಿಶ್ವಕರ್ಮ ವಿದ್ಯಾರ್ಥಿ ನಿಲಯಕ್ಕೆ ಸ್ವಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಐಟಿಐ, ಪಾಲಿಟೆಕ್ನಿಕ್, ಸಂಸ್ಕೃತ ಕಾಲೇಜು, ಪದವಿ ಕಾಲೇಜು, ಇಂಜಿನಿ ಯರಿಂಗ್, ಕಾನೂನು ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಕಲಿಯುತ್ತಿರುವ ಸಮಾಜದ ಬಡ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಹ ಆಸಕ್ತರು ಅಧ್ಯಕ್ಷರು, ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜಸೇವಾ ಸಂಘ, ಗಾಯತ್ರಿ ಕಲ್ಯಾಣ ಮಂಟಪ, ಕುಂಜಿಬೆಟ್ಟು ಉಡುಪಿ- 576102(ದೂ.ಸಂ.: 0820-2534970 ) ಇಲ್ಲಿಗೆ ಅರ್ಜಿ ಸಲ್ಲಿಸಬಹುದು ಎಂದು ಸಂಘದ ಅಧ್ಯಕ್ಷ ವಾಸುದೇವ್ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





