ಗೊಮ್ಮಟೇಶ್ವರ ಮಹಾಮಸ್ತಕಾಭಿಷೇಕಕ್ಕೆ 43.75 ಕೋಟಿ ರೂ.ಬಿಡುಗಡೆ
ಬೆಂಗಳೂರು, ಜು. 21: ಶ್ರವಣಬೆಳಗೊಳದ ಗೊಮ್ಮಟೇಶ್ವರ ಮೂರ್ತಿಗೆ 2018ರ ಫೆಬ್ರವರಿಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕಾಮಗಾರಿ ಕೈಗೊಳ್ಳಲು 175ಕೋಟಿ ರೂ. ಬಿಡುಗಡೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ.
ಮೊದಲ ಕಂತಿನಲ್ಲಿ 43.75 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿಗೆ ಬಿಡುಗಡೆ ಮಾಡಿದ್ದು, ಉದ್ದೇಶಿತ ಕಾಮಗಾರಿಗಳ ಅಂದಾಜು ಪಟ್ಟಿಗೆ ಸಂಬಂಧಿಸಿದ ಪ್ರಾಧಿಕಾರದಿಂದ ಆಡಳಿತಾತ್ಮಕ ಮತ್ತು ತಾಂತ್ರಿಕ ಅನುಮೋದನೆಗೆ ಷರತ್ತು ವಿಧಿಸಲಾಗಿದೆ.
ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಸರಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಬಳಸಿಕೊಳ್ಳಲು ಹೊಸ ಬ್ಯಾಂಕ್ ಖಾತೆಯನ್ನು ತೆರೆದು ಲೆಕ್ಕ ಪತ್ರಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕು. ಮಂಜೂರಾಗಿರುವ ಅನುದಾನವನ್ನು ನಾಲ್ಕು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸರಕಾರ ಹೇಳಿದೆ.
Next Story





