ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
.jpg)
ಕಾಸರಗೋಡು, ಜು. 21: ಕಾಲೇಜು ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿತ್ತಾರಿಕಾಲ್ ನ ಕಡೋಮನಿಯಲ್ಲಿ ನಡೆದಿದ್ದು, ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಚಿತ್ತಾರಿಕಾಲ್ ಕಡೋಮನಿಯ ವಿ.ಎಸ್. ಅನುಷಾ (18) ಮೃತರು ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದ ಅನೂಷಾ ಒಂದು ತಿಂಗಳ ಹಿಂದೆ ಊರಿಗೆ ಬಂದಿದ್ದರು. ತಂದೆ, ತಾಯಿ ಸಂಜೆ ಹುಲ್ಲು ತರಲೆಂದು ಹೊರಗಡೆ ತೆರಳಿದ್ದು, ಈ ಸಂದರ್ಭದಲ್ಲಿ ಘಟನೆ ನಡೆದಿದೆ. ಇಬ್ಬರು ಮನೆಗೆ ಬಂದಾಗ ಅನುಷಾ ನೇಣು ಬಿಗಿದಿರುವುದು ಕಂಡು ಬಂದಿದೆ.
ಪರಿಸರವಾಸಿಗಳನ್ನು ಕರೆದು ಈಕೆಯನ್ನು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಅನುಷಾ ಆತ್ಮಹತ್ಯೆ ಮಾಡುವ ಸ್ಥಿತಿಯಲ್ಲಿರಲಿಲ್ಲ. ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಿದ್ದು,ಕೆಲವೇ ದಿನಗಳಲ್ಲಿ ನರ್ಸಿಂಗ್ ಶಿಕ್ಷಣಕ್ಕೆ ಬೆಂಗಳೂರಿಗೆ ತೆರಳುವ ಸಿದ್ಧತೆಯಲ್ಲಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ.
ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಂಬಂಧಿಕರು ಒತ್ತಾಯಿಸಿದ್ದು, ವೆಳ್ಳರಿಕುಂಡು ಸರ್ಕಲ್ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ನೇತೃತ್ವದ ಪೊಲೀಸ್ ತಂಡ ತನಿಖೆ ನಡೆಸುತ್ತಿದೆ.





