ಕಂಚಿನಡ್ಕ ಪದವು: ಕಲ್ಲಿನ ಕೋರೆಗೆ ಬಿದ್ದು ಶಾಲಾ ಬಾಲಕ ಮೃತ್ಯು

ಬಂಟ್ವಾಳ, ಜು.22: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನೊಬ್ಬ ನೀರು ತುಂಬಿದ್ದ ಕಲ್ಲಿನ ಕೋರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಸಜಿಪ ನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೃತ ಬಾಲಕನನ್ನು ಸ್ಥಳೀಯ ಶಾಲೆಯ 4ನೆ ತರಗತಿ ವಿದ್ಯಾರ್ಥಿ ಇರ್ಫಾನ್ ಎಂದು ಗುರುತಿಸಲಾಗಿದೆ. ಇರ್ಫಾನ್ ಇಂದು ಮಧ್ಯಾಹ್ನ ಶಾಲೆ ಬಿಟ್ಟು ಇತರ ನಾಲ್ವರು ಸಹಪಾಠಿಗಳೊಂದಿಗೆ ಮನೆಗೆ ತೆರಳುತ್ತಿದ್ದ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭಿಸಬೇಕಿದೆ.
Next Story





