ತಲೆಮರೆಸಿಕೊಂಡಿದ್ದ ಹಲ್ಲೆ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸೆರೆ

ಮಂಗಳೂರು, ಜು.22: ಮೂರು ವರ್ಷಗಳ ಹಿಂದೆ ನಡೆದ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಪೊಲೀಸರಿಂದ ಲುಕ್‌ಔಟ್ ಸರ್ಕ್ಯುಲರ್ ಹೊರಡಿಸಲ್ಪಟ್ಟಿದ್ದ ಆರೋಪಿಯೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಪೊಲೀಸರು ಬಂಧಿಸಿದ್ದಾರೆ.
ಕೋಡಿಂಬಾಡಿ ನಿವಾಸಿ ನವಾಝ್ ಬಂಧಿತ ಆರೋಪಿ. 2014ರ ಸೆಪ್ಟಂಬರ್ 14ರಂದು ಕೋಡಿಂಬಾಡಿ ಮಸೀದಿಯ ಲೆಕ್ಕ ಪರಿಶೋಧನೆ ವಿಚಾರವಾಗಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಈತನನ್ನು ಬಂಧಿಸಲಾಗಿದೆ. ಅಂದು ಲೆಕ್ಕ ಪರಿಶೋಧನೆಯ ವಿಚಾರಕ್ಕೆ ಸಂಬಂಧಿಸಿ ಜಿ.ಎಸ್.ಹನೀಫ್ ಎಂಬವರ ಮೇಲೆ 8 ಮಂದಿಯ ತಂಡ ಹಲ್ಲೆ ನಡೆಸಿತ್ತು. ಹಲ್ಲೆಗೆ ಸಂಬಂಧಿಸಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಯಾಗಿದ್ದ ನವಾಝ್ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ.
ಇಂದು ಆತ ವಿದೇಶದಿಂದ ಬರುತ್ತಿದ್ದ ವೇಳೆ ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
Next Story





