Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತಮ ಸಮಾಜವನ್ನು ನಿರ್ಮಿಸುವ ಕಾರ್ಯ...

ಉತ್ತಮ ಸಮಾಜವನ್ನು ನಿರ್ಮಿಸುವ ಕಾರ್ಯ ಶಿಕ್ಷಕರಿಂದ ಮಾತ್ರ ಸಾಧ್ಯ:ಡಾ.ಎಂ.ಸಿ. ಮೋಹನಕುಮಾರಿ

ವಾರ್ತಾಭಾರತಿವಾರ್ತಾಭಾರತಿ22 July 2017 5:23 PM IST
share
ಉತ್ತಮ ಸಮಾಜವನ್ನು ನಿರ್ಮಿಸುವ ಕಾರ್ಯ ಶಿಕ್ಷಕರಿಂದ ಮಾತ್ರ ಸಾಧ್ಯ:ಡಾ.ಎಂ.ಸಿ. ಮೋಹನಕುಮಾರಿ

ಗುಂಡ್ಲುಪೇಟೆ, ಜು.22: ಉತ್ತಮ ಸಮಾಜವನ್ನು ನಿರ್ಮಿಸುವ ಮಹತ್ತರ ಕಾರ್ಯ ಶಿಕ್ಷಕರಿಂದ ಮಾತ್ರ ಸಾಧ್ಯವಿದ್ದು, ಈ ದಿಕ್ಕಿನಲ್ಲಿ ಶ್ರಮಿಸಿಸಬೇಕು ಎಂದು ಶಾಸಕಿ ಡಾ.ಎಂ.ಸಿ. ಮೋಹನಕುಮಾರಿ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕ್ಷೇತ್ರ ಶಿಕ್ಪಣಾಧಿಕಾರಿಗಳ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ನೀರಾವರಿ ಹಾಗೂ ಕೈಗಾರಿಕೆಗಳಿಲ್ಲದ ತಾಲೂಕಿನಲ್ಲಿ ಶೈಕ್ಷಣಿಕ ಸೌಲಭ್ಯಗಳನ್ನು ನೀಡುವುದರಿಂದ ಮಾತ್ರ ಅಭಿವೃದ್ದಿ ಹೊಂದಬಹುದು ಎಂಬ ದೂರದೃಷ್ಟಿಯಿಂದ ದಿ.ಎಚ್.ಎಸ್.ಮಹದೇವಪ್ರಸಾದ್ ತಾಲೂಕಿನ ಎಲ್ಲ ಗ್ರಾಮಗಳಿಗೂ 246 ಪ್ರಾಥಮಿಕ ಶಾಲೆಗಳು, 20 ಸರ್ಕಾರಿ ಪ್ರೌಢಶಾಲೆಗಳು, ಹೋಬಳಿಗೊಂದು ಪದವಿ ಹಾಗೂ  ವಸತಿ ಶಾಲೆಗಳನ್ನು ಪ್ರಾರಂಭಿಸಿದ್ದರಿಂದ 28 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಗ್ರಾಮೀಣ ಯುವಕರು ವಿದ್ಯೆ ಹಾಗೂ ಉದ್ಯೋಗ ತರಭೇತಿ ಪಡೆಯಲು ಸಾಧ್ಯವಾಗುವಂತೆ ಸರ್ಕಾರಿ ಯಂತ್ರೋಪಕರಣ ಕಾರ್ಯಾಗಾರ ಹಾಗೂ ಮೂರು ಐಟಿಐ ಕಾಲೇಜುಗಳನ್ನು ಪ್ರಾರಂಭಿಸಿದ್ದರು. ಅಲ್ಲದೆ ಪಾಲಿಟೆಕ್ನಿಕ್ ಕಾಲೇಜು ಹಾಗೂ ಕಾನೂನು ಕಾಲೇಜು ಸ್ಥಾಪನೆಗೆ ಮುಂದಾಗಿದ್ದರು ಎಂದರು.

ಇಷ್ಟೆಲ್ಲಾ ಶಾಲಾ ಕಾಲೇಜುಗಳನ್ನು ಸ್ಥಾಪಿಸಿದ್ದರೂ ಸಹಾ ತಾಲೂಕು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ನೀಡುವಲ್ಲಿ ಎಡವುತ್ತಿದ್ದು, ಪ್ರತಿಯೊಬ್ಬ ಶಿಕ್ಷಕರೂ ಪ್ರಾಮಾಣಿಕ ಪ್ರಯತ್ನ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಶಿಕ್ಷಣ ನೀಡುವ ಜೊತೆಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್ ಮಾತನಾಡಿ, ಪ್ರತಿ ಬಾರಿಯೂ ತಿಂಗಳ ಕೊನೆಯಾದರೂ ಸಂಬಳ ಬಟಾವಡೆಯಾಗುತ್ತಿಲ್ಲ. ಹಾಗೂ ಆರೋಗ್ಯ ಸಂಬಂಧಿತ ಬಿಲ್‌ಗಳು ಪಾವತಿಯಾಗುತ್ತಿಲ್ಲ. ಇದರಿಂದ ಶಿಕ್ಷಕ ಸಂಕುಲ ತೊಂದರೆಗೊಳಗಾಗಿದೆ ಎಂದು ಮಾಡಿದ ಮನವಿಗೆ ಉತ್ತರಿಸಿದ ಶಾಸಕಿ, ಮುಂದಿನ ದಿನಗಳಲ್ಲಿ ಶಿಕ್ಷಕರಿಗೆ ಕಾಲಕಾಲಕ್ಕೆ ವೇತನ ಹಾಗೂ ಆರೋಗ್ಯವಿಮೆ ಸೌಲಭ್ಯಗಳ ಪಾವತಿಮಾಡಲು ಸಾಧ್ಯವಾಗುವಂತೆ ಕ್ರಮವಹಿಸುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಚಾಮುಲ್ ನಿರ್ದೇಶಕರಾದ ಎಚ್.ಎಸ್.ನಂಜುಂಡಪ್ರಸಾದ್, ಶಾಸಕರ ಪುತ್ರ ಗಣೇಶ್ ಪ್ರಸಾದ್, ಕಣ್ಣೇಗಾಲ ಸ್ವಾಮಿ, ಪುರಸಭೆ ಅಧ್ಯಕ್ಷೆ ಭಾಗ್ಯಮ್ಮ, ಮಾಜಿ ಅಧ್ಯಕ್ಷ ಪಿ.ಚಂದ್ರಪ್ಪ, ಸದಸ್ಯರಾದ ಪಿ.ಗಿರೀಶ್, ಸುರೇಶ್, ಬಿಇಒ ಸಿ.ಎನ್.ರಾಜು, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿದೇಶಕ ಸತೀಶ್, ಭೂಸೇನಾನಿಗಮದ ಇಂಜಿನಿಯರ್ ರವಿಶಂಕರ್, ಶಿಕ್ಷಕರ ಸಂಘಗಳ ಪದಾದಿಕಾರಿಗಳು ಹಾಗೂ ಶಿಕ್ಷಕರು ಹಾಜರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X