Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಧಾರಿತ ಗಸ್ತು ವ್ಯವಸ್ಥೆಯಲ್ಲಿ 23...

ಸುಧಾರಿತ ಗಸ್ತು ವ್ಯವಸ್ಥೆಯಲ್ಲಿ 23 ಸಾವಿರ ಸದಸ್ಯರು: ಎಸ್ಪಿ ಬಾಲಕೃಷ್ಣ

ವಾರ್ತಾಭಾರತಿವಾರ್ತಾಭಾರತಿ22 July 2017 8:42 PM IST
share
ಸುಧಾರಿತ ಗಸ್ತು ವ್ಯವಸ್ಥೆಯಲ್ಲಿ 23 ಸಾವಿರ ಸದಸ್ಯರು: ಎಸ್ಪಿ ಬಾಲಕೃಷ್ಣ

ಉಡುಪಿ, ಜು.22: ಪೊಲೀಸ್ ಇಲಾಖೆಯ ನೂತನ ಗಸ್ತು ವ್ಯವಸ್ಥೆಯನ್ನು ಆಯಾ ಪೊಲೀಸ್ ಠಾಣೆಯ ಸಿಬ್ಬಂದಿಗಳ ಸಂಖ್ಯೆಗಳಿಗೆ ಅನುಗುಣವಾಗಿ ವಿಂಗಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 2000 ಪೊಲೀಸ್ ಸಿಬ್ಬಂದಿಗಳಿದ್ದರೆ ನಾಗರಿಕ ಸಮಿತಿಯ ಸದಸ್ಯರುಗಳ ಸಂಖ್ಯೆ 23 ಸಾವಿರ ಇದೆ. ಇದರಿಂದ ಮುಂದಿನ ದಿನಗಳಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ.ಬಾಲಕೃಷ್ಣ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಉಡುಪಿ ಉಪವಿಭಾಗದ ವತಿಯಿಂದ ಶನಿವಾರ ಉಡುಪಿ ಅಮ್ಮಣ್ಣಿ ರಾಮಣ್ಣ ಸಭಾಂಗಣದಲ್ಲಿ ನಡೆದ ಉಡುಪಿ ನಗರ ವೃತ್ತ ಮತ್ತು ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ನೂತನ ಸುಧಾರಿತ ಗಸ್ತು ವ್ಯವಸ್ಥೆಯ ಗಸ್ತು ನಾಗರಿಕ ಸಮಿತಿ ಸದಸ್ಯರ ಸಭೆಯಲ್ಲಿ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಿ ಅವರು ಮಾತನಾಡುತಿದ್ದರು.

ರಾಜ್ಯದಲ್ಲಿ ಎ.1ರಿಂದ ಜಾರಿಗೆ ತಂದಿರುವ ಸುಧಾರಿತ ಗಸ್ತು ವ್ಯವಸ್ಥೆಯು ಪೊಲೀಸ್ ಇಲಾಖೆಯಲ್ಲಿನ ಅಧಿಕಾರ ವಿಕೇಂದ್ರೀಕರಣವಾಗಿದೆ. ಈ ವ್ಯವಸ್ಥೆಯ ಮೂಲಕ ಇಲಾಖೆಯು ಜನ ಆಶೋತ್ತರ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಗಸ್ತು ಸದಸ್ಯರ ಸಂಖ್ಯೆ ಸುಮಾರು 12ರಿಂದ 13ಲಕ್ಷ ಇದ್ದು, ಇವರ ಭಾವಚಿತ್ರ, ವಿಳಾಸ ಹಾಗೂ ಮೊಬೈಲ್ ಸಂಖ್ಯೆಗಳ ದಾಖಲೆಗಳು ಪೊಲೀಸ್ ಇಲಾಖೆಯಲ್ಲಿವೆ. ಸಾರ್ವಜನಿಕರು ನೀಡುವ ಯಾವುದೇ ಮಾಹಿತಿ ಯನ್ನು ಸೋರಿಕೆ ಮಾಡದೆ ಗೌಪ್ಯವಾಗಿ ಇಡಲಾಗುವುದು. ಈ ಸದಸ್ಯರು ಒಂದು ವರ್ಷಗಳ ಕಾಲ ಸಮಿತಿಯಲ್ಲಿ ಸದಸ್ಯರಾಗಿರುತ್ತಾರೆ ಎಂದರು.

ಉಡುಪಿ ಉಪವಿಭಾಗದ ಡಿವೈಎಸ್ಪಿ ಕುಮಾರಸ್ವಾಮಿ ಮಾತನಾಡಿ, ಸಮಾಜ ದಲ್ಲಿ ಅಪರಾಧ ತಡೆಗಟ್ಟುವುದು, ಪತ್ತೆ ಹಚ್ಚುವುದು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಈ ಗಸ್ತು ವ್ಯವಸ್ಥೆಯ ಉದ್ದೇಶವಾಗಿದೆ. ಅಪರಾಧಕ್ಕೆ ಸಂಬಂಧಿಸಿ ಮಾಹಿತಿಯನ್ನು ಈ ಸಮಿತಿಯ ಮೂಲಕ ಕಲೆ ಹಾಕಲಾಗುತ್ತದೆ. ಈ ಸುಧಾರಿತ ಗಸ್ತು ವ್ಯವಸ್ಥೆಯಲ್ಲಿ ಒಂದು ಗ್ರಾಮ/ವಾರ್ಡ್‌ಗೆ ಓರ್ವ ಪೊಲೀಸ್ ಸಿಬ್ಬಂದಿ ಯನ್ನು ನೇಮಕ ಮಾಡಲಾಗುತ್ತದೆ. ಈ ಮೂಲಕ ಪೊಲೀಸ್ ಹಾಗೂ ಸಾರ್ವ ಜನಿಕರ ಮಧ್ಯೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಲಾಗುವುದು ಎಂದು ತಿಳಿಸಿದರು.

ಪ್ರೋಬೇಶನರಿ ಐಎಎಸ್ ಅಧಿಕಾರಿ ಪೂವಿತಾ, ಮಣಿಪಾಲ ಪೊಲೀಸ್ ನಿರೀಕ್ಷಕ ಸುದರ್ಶನ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಚಾರ ಜಾಗೃತಿ ಕುರಿತ ಬುಕ್‌ಲೆಟ್ ಬಿಡುಗಡೆಗೊಳಿಸಲಾಯಿತು. ಗಸ್ತು ಸಿಬ್ಬಂದಿಗಳಾದ ಉಡುಪಿ ನಗರ ಠಾಣೆಯ ಲಕ್ಷ್ಮಣ್, ಮಲ್ಪೆ ಠಾಣೆಯ ಭರಮ ರೆಡ್ಡಿ, ಮಣಿ ಪಾಲ ಠಾಣೆಯ ನೇತ್ರಾವತಿ, ಸಮಿತಿ ಸದಸ್ಯರ ಪರವಾಗಿ ಮೇಟಿ ಮುದಿಯಪ್ಪ ಮಾತನಾಡಿದರು.

ಉಡುಪಿ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ಸ್ವಾಗತಿಸಿದರು. ಮನ ಮೋಹನ್ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮುನ್ನ ಒಳಕಾಡು ಸರಕಾರಿ ಶಾಲೆ ಮತ್ತು ಮಣಿಪಾಲ ಎಂಜೆಸಿ ಅವರಿಂದ ಪ್ರಹಸನ ಜರಗಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X