ಗೋಪಾಲಕೃಷ್ಣ ಅಡಿಗರು ಕನ್ನಡದ ಸಾತ್ವಿಕ ಕವಿ: ಅದಮಾರು ಶ್ರೀ

ಉಡುಪಿ, ಜೂ.21: ಕನ್ನಡ ಭಾಷೆಗೆ ಬಹಳಷ್ಟು ಕೊಡುಗೆ ನೀಡಿರುವ ಗೋಪಾಲಕೃಷ್ಣ ಅಡಿಗರು ಕನ್ನಡದ ಸಾತ್ವಿಕ ಕವಿ. ಇವರು ನಮ್ಮ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕವಿಗಳು ಎಂದು ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ವಿಭಾಗ ಮತ್ತು ಮೊಗೇರಿಯ ಮೂಗೋಶ್ರೀ ವೇದಿಕೆಯ ಜಂಟಿ ಆಶ್ರಯದಲ್ಲಿ ಶನಿವಾರ ಕಾಲೇಜಿನ ಮಿನಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾದ ನವ್ಯಕವಿ ಎಂ.ಗೋಪಾಲಕೃಷ್ಣ ಅಡಿಗರ ಜನ್ಮ ಶತಾಬ್ದಿ ಆಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಕನ್ನಡದ ಬಗ್ಗೆ ಬೀದಿಯಲ್ಲಿ ನಿಂತು ಮಾತನಾಡದವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಆದರೆ ಬೆಂಗಳೂರಿನಂತಹ ನಗರಗಳಲ್ಲಿ ಭಾಷೆಯ ಹೆಸರಿನಲ್ಲಿ ಗಲಾಟೆ ಮಾಡುವವರಿಂದ ಕನ್ನಡಕ್ಕೆ ಯಾವುದೇ ಕೊಡುಗೆ ಇಲ್ಲ. ದಾಸರ ನಂತರ ಕನ್ನಡಕ್ಕೆ ಸಾತ್ವಿಕ ಕವಿಗಳು ಕನ್ನಡಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ ಎಂದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಗದೀಶ್ ಶೆಟ್ಟಿ ವಹಿಸಿ ದ್ದರು. ಮುಖ್ಯ ಅತಿಥಿಗಳಾಗಿ ಕಸಾಪ ಮಾಜಿ ಜಿಲ್ಲಾಧ್ಯಕ್ಷ ಉಪ್ಪುಂದ ಚಂದ್ರ ಶೇಖರ ಹೊಳ್ಳ, ರಮೇಶ್ ವೈದ್ಯ, ಕಾಲೇಜಿನ ಆಡಳಿತ ಮಂಡಳಿಯ ಡಾ. ಜಿ.ಎಸ್.ಚಂದ್ರಶೇಖರ್, ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಕಾಂತ್ ರಾವ್ ಸಿದ್ಧಾಪುರ ಸ್ವಾಗತಿಸಿ ದರು. ಜನಾರ್ದನ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಉಪನ್ಯಾಸಕ ಶಿವಕುಮಾರ್ ವಂದಿಸಿದರು. ಮಂಜುನಾಥ ಕರಬ ಕಾರ್ಯಕ್ರಮ ನಿರೂಪಿಸಿದರು.







