ಕಾಂಗ್ರೆಸ್ ಕಾರ್ಪೊರೇಟರ್‌ಗಳ ಸಭೆ

ಮಂಗಳೂರು, ಜು.22: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರು ಮಹಾ ನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರ ವಿಶೇಷ ಸಭೆಯು ಶನಿವಾರ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಹರೀಶ್ ಕುಮಾರ್ ಆ.15ರೊಳಗೆ ವಿವಿಧ ಸಮಿತಿಗಳ ವಿವರ ಹಾಗೂ ಬೂತ್ ಮಟ್ಟ ಏಜೆಂಟ್‌ಗಳ ವಿವರಗಳನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ತಲುಪಿಸುವಂತೆ ಹಾಗೂ ಕಳೆದ 4 ವರ್ಷಗಳ ರಾಜ್ಯ ಸರಕಾರದ ಸಾಧನೆಯನ್ನು ಮನೆಮನೆಗೆ ತಲುಪಿಸಲು ಮನವಿ ಮಾಡಿದರು.
ಈ ಸಂದರ್ಭ ಮನಪಾ ವ್ಯಾಪ್ತಿಯ ಎಲ್ಲಾ ಬೂತ್ ಮಟ್ಟಗಳಲ್ಲಿ ಸಮಿತಿಗಳನ್ನು ರಚಿಸಿ ಸಭೆ ನಡೆಸುವ ಬಗ್ಗೆ, ವಾರ್ಡ ಸಮಿತಿಗಳನ್ನು ಪುನರ್ರಚಿಸುವ ಬಗ್ಗೆ ಹಾಗೂ ಸದಸ್ಯತ್ವ ನೋಂದಣಿಯ ಬಗ್ಗೆ ಚರ್ಚಿಸಲಾಯಿತು. ಮಾಜಿ ಮೇಯರ್‌ಗಳಾದ ಮಹಾಬಲ ಮಾರ್ಲ, ಜೆಸಿಂತಾ ಆಲ್ಫ್ರೆಡ್, ಹರಿನಾಥ್ ಕೆ, ಶಶಿಧರ್ ಹೆಗ್ಡೆ ಮತ್ತು ಕಾರ್ಪೊರೇಟರ್‌ಗಳಾದ ಮುಹಮ್ಮದ್ ಕುಂಜತ್‌ಬೈಲ್, ಪುರುಷೋತ್ತಮ ಚಿತ್ರಾಪುರ, ಪ್ರಕಾಶ್ ಸಾಲ್ಯಾನ್, ಅಬ್ದುಲ್ ರವೂಫ್, ಅಶೋಕ್ ಡಿ.ಕೆ.ಸಲಹೆ ನೀಡಿದರು.
ಕೆಪಿಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡ ನವೀನ್ ಆರ್. ಡಿಸೋಜರವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಮೇಯರ್ ಕವಿತಾ ಸನಿಲ್, ಉಪ ಮೇಯರ್ ರಜನೀಶ್ ಕಾಪಿಕಾಡ್, ಜಿಲ್ಲಾ ಕಾಂಗ್ರೆಸ್ ಕಚೇರಿ ಆಡಳಿತ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ, ಬ್ಲಾಕ್ ಅಧ್ಯಕ್ಷರಾದ ವಿಶ್ವಾಸ್ ಕುಮಾರ್, ಕೇಶವ ಸನಿಲ್, ಹುಸೈನ್ ಕಾಟಿಪಳ್ಳ, ಅಪ್ಪಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ನಾಗವೇಣಿ, ಸಬಿತಾ ಮಿಸ್ಕಿತ್ ಮತ್ತಿತರರು ಉಪಸ್ಥಿತರಿದ್ದರು. ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ವಂದಿಸಿದರು.







