ಕಾನೂನು ರೀತಿಯಲ್ಲಿ ರಾಮಮಂದಿರ ನಿರ್ಮಾಣ: ಅಮಿತ್ ಶಾ

ಹೊಸದಿಲ್ಲಿ, ಜು.22: ಪರಸ್ಪರ ಮಾತುಕತೆ ಬಳಿಕ ಕಾನೂನು ರೀತಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ನಮ್ಮ ಪಕ್ಷ ಬಯಸುತ್ತದೆ ಎಂದು ಬಿಜೆಪಿಯ ಅಧ್ಯಕ್ಷ ಅಮಿತ್ ಶಾ ಇಂದು ಹೇಳಿದ್ದಾರೆ.
ಪಕ್ಷದ ನಿಲುವು ಸ್ಪಷ್ಟವಾಗಿದೆ ಹಾಗೂ ಕಳೆದ ನಾಲ್ಕು ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಮಂದಿರವನ್ನು ಕಾನೂನು ರೀತಿಯಲ್ಲಿ ನಿರ್ಮಿಸಲಾಗುವುದು. ಅದಕ್ಕಿಂತ ಮೊದಲು ಮಾತುಕತೆ ನಡೆಸಲಾಗುವುದು ಎಂದು ಅವರು ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕೆನೆಪದರವನ್ನು ಮೀಸಲಾತಿ ಸೌಲಭ್ಯದಿಂದ ಹೊರಗಿಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸಂಸತ್ತಿನಲ್ಲಿ ಸರ್ವ ಪಕ್ಷಗಳ ಜೊತೆ ಮಾತುಕತೆ ನಡೆಸಿದ ಬಳಿಕ ನಿರ್ಧರಿಸಲಾಗುವುದು ಎಂದರು.
ಇಲ್ಲಿಗೆ ಮೂರು ದಿನಗಳ ಭೇಟಿಗಾಗಿ ಆಗಮಿಸಿರುವ ಶಾ, ಲೋಕಸಭೆ ಹಾಗೂ ವಿಧಾನ ಸಭೆಯ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಬಗ್ಗೆ ರಾಜಕೀಯ ಪಕ್ಷಗಳು ಮಾತುಕತೆ ನಡೆಸಬೇಕು ಹಾಗೂ ಈ ಬಗ್ಗೆ ಚುನಾವಣಾ ಆಯೋಜಿಗಕ್ಕೆ ಮಾಹಿತಿ ನೀಡಬೇಕು ಎಂದರು.
Next Story





