ಜು.29: ‘ನರಕಾಸುರ ಮೋಕ್ಷ’
ಮಂಗಳೂರು, ಜು.23: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡಮಿ ವಿಶೇಷ ಘಟಕ ಯೋಜನೆಯಡಿಯಲ್ಲಿ ತೆಂಕುತಿಟ್ಟು ಯಕ್ಷಗಾನ ಕಲಾ ಪ್ರಕಾರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿಂದ ಶ್ರೀರಾಮ ಯಕ್ಷಗಾನ ಕಲಾ ಸಂಘ ಕಲ್ಲಡ್ಕ ಹಾಗೂ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ‘ನರಕಾಸುರ ಮೋಕ್ಷ’ ಯಕ್ಷಗಾನ ಜು.29ರಂದು ಸಂಜೆ 6.30ರಿಂದ ಇರಾ ಶ್ರೀ ಸೋಮನಾಥೇಶ್ವರ ಕಲಾ ಮಂಟಪದಲ್ಲಿ ಪ್ರದರ್ಶನಗೊಳ್ಳಲಿದೆ.
ಸಭಾ ಕಾರ್ಯಕ್ರಮದಲ್ಲಿ ಕಟೀಲು ಆರು ಮೇಳಗಳ ಸಂಚಾಲಕ ದೇವೀಪ್ರಸಾದ್ ಶೆಟ್ಟಿ ಕಲ್ಲಾಡಿ ಅಧ್ಯಕ್ಷತೆ ವಹಿಸಲಿದ್ದು, ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ್ ಆರ್. ಕರ್ಕೇರ ಉದ್ಘಾಟಿಸಲಿದ್ದಾರೆ. ಬೋಳಂತೂರು ಗ್ರಾಪಂ ಉಪಾಧ್ಯಕ್ಷ ಚಂದ್ರಶೇಖರ ರೈ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ..
Next Story





