Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಸರಾದಲ್ಲೂ ರಾಜಕೀಯ ಬೆರೆಯುತ್ತಿರುವುದು...

ದಸರಾದಲ್ಲೂ ರಾಜಕೀಯ ಬೆರೆಯುತ್ತಿರುವುದು ವಿಷಾದನೀಯ: ಪಿ.ಎಂ.ರವಿ

ವಾರ್ತಾಭಾರತಿವಾರ್ತಾಭಾರತಿ23 July 2017 6:02 PM IST
share
ದಸರಾದಲ್ಲೂ ರಾಜಕೀಯ ಬೆರೆಯುತ್ತಿರುವುದು ವಿಷಾದನೀಯ: ಪಿ.ಎಂ.ರವಿ

ಮಡಿಕೇರಿ, ಜು.23: ಮಾತು ಮನೆ ಕೆಡೆಸಿತು, ತೂತು ಒಲೆ ಕೆಡಿಸಿತು ಎಂಬ ಗಾದೆ ಮಾತಿನಂತೆ ದಸರಾ ಬೈಲಾ ತಿದ್ದುಪಡಿ ಸಭೆ ಕೇವಲ ಆರೋಪ ಪ್ರತ್ಯಾರೋಪದಿಂದ ಮೊಟಕು ಗೊಂಡಿರುವುದು ವಿಷಾದನೀಯವೆಂದು ತಿಳಿಸಿರುವ ತುಳುವೆರ ಜನಪದ ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ದಸರಾ ಸಮಿತಿಯ ಮಾಜಿ ಉಪಾಧ್ಯಕ್ಷರಾದ ಪಿ.ಎಂ.ರವಿ, ನಾಡಹಬ್ಬ ದಸರಾದಲ್ಲೂ ರಾಜಕೀಯ ಬೆರೆಯುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲವೆಂದು ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಪಿ.ಎಂ.ರವಿ, ನಾಡಹಬ್ಬ ದಸರಾ ಎಲ್ಲರೂ ಒಗ್ಗೂಡಿ ಆಚರಿಸಬೇಕಾದ ಹಬ್ಬವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ವಾದ, ಪ್ರತಿವಾದ, ವಿವಾದಗಳನ್ನು ಸೃಷ್ಟಿಸುತ್ತಿರುವುದು ಬೇಸರದ ವಿಚಾರವಾಗಿದೆ. ದಸರಾ ಸಭೆಯಲ್ಲಿ ಗುಂಪುಗಾರಿಕೆ ಮತ್ತು ರಾಜಕೀಯ ಪ್ರವೇಶವಾಗಿರುವುದು ಸ್ಪಷ್ಟವಾಗುತ್ತಿದೆ. ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಗದ್ದಲ ಗಲಾಟೆಯಿಂದ ಮಡಿಕೇರಿ ಜನತೆ ತಲೆ ತಗ್ಗಿಸುವಂತ್ತಾಗಿದ್ದು, ಇದೀಗ ದಸರಾ ಸಭೆಯಲ್ಲೂ ಇದೇ ಬೆಳವಣಿಗೆ ಕಂಡು ಬರುತ್ತಿರುವುದು ಅಪಮಾನಕಾರಿ ಎಂದು ಪಿ.ಎಂ.ರವಿ ಟೀಕಿಸಿದ್ದಾರೆ.

ನಾಡಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಮನೋಸ್ಥಿತಿಗಳು ಕಾರ್ಯಪ್ರವೃತ್ತವಾಗಬೇಕೆ ಹೊರತು ಸ್ವಪ್ರತಿಷ್ಠೆಗಾಗಿ ದಸರಾವನ್ನು ಬಳಸಿಕೊಳ್ಳುವುದು ಸರಿಯಲ್ಲ. ಕೇವಲ ಸ್ಥಾನಮಾನಕ್ಕಾಗಿ ದಸರಾ ಸಭೆಯಲ್ಲೂ ಹೋರಾಟ ಮನೋಭಾವ ಪ್ರದರ್ಶನ ಯಾರಿಗೂ ಶೋಭೆ ತರುವುದಿಲ್ಲ. ನಾಡಿಗೇ ಮಾದರಿಯಾಗಿರುವ ಮಡಿಕೇರಿ ದಸರಾ ಆಚರಣೆಯನ್ನು ಅರ್ಥಪೂರ್ಣಗೊಳಿಸಲು ಆರೋಗ್ಯಕರ ಚರ್ಚೆಯ ಅಗತ್ಯವಿದೆಯೇ ಹೊರತು ಹಾದಿ ತಪ್ಪುವ ಬೆಳವಣಿಗೆಗಳನ್ನು ಜನ ಒಪ್ಪುವುದಿಲ್ಲ. ಮಡಿಕೇರಿ ದಸರಾ ಜನರಿಂದ ಜನರಿಗಾಗಿ ನಡೆಯುತ್ತಿದೆಯೇ ಹೊರತು ಕೆಲವು ವ್ಯಕ್ತಿಗಳಿಗೆ ಸೀಮಿತವಾಗಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬೈಲಾ ತಿದ್ದುಪಡಿ ವಿಚಾರ ದಸರಾ ಸಮಿತಿ ಮಾತ್ರವಲ್ಲದೆ ಸಮಿತಿಯ ಪೋಷಕರು, ಮಹಾಪೋಷಕರ ಸ್ಥಾನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರು. ಜಿಲ್ಲೆಯ ಶಾಸಕರು. ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಬೈಲಾ ತಿದ್ದುಪಡಿ ಸಭೆ ನಡೆಸುವುದು ಸೂಕ್ತವೆಂದು ಪಿ.ಎಂ.ರವಿ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿಯೇ ಅತೀ ವಿಜೃಂಭಣೆಯಿಂದ ನಡೆಯುವ ಮಡಿಕೇರಿ ದಸರಾಕ್ಕೆ ಹೊರ ಜಿಲ್ಲೆಯಿಂದಲು ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಜಿಲ್ಲೆಯ ಜನತೆ ಪ್ರಜ್ಞಾವಂತರು ಹಾಗೂ ಶಾಂತಿ ಪ್ರಿಯರು ಎನ್ನುವ ಮಾತಿದೆ. ಈ ಗೌರವವನ್ನು ಉಳಿಸಿಕೊಳ್ಳುವ ಜವಬ್ದಾರಿ ಜಿಲ್ಲೆಯ ಪ್ರತಿಯೊಬ್ಬರ ಮೇಲಿದೆ. ದಸರಾ ಸಮಿತಿಯ ಮುಂದಿನ ಸಭೆಯನ್ನು ಅರ್ಥಪೂರ್ಣಗೊಳಿಸಲು ಸರ್ವರು ಸಹನೆಯಿಂದ ಸಹಕರಿಸುವ ಅಗತ್ಯವಿದೆ ಎಂದು ರವಿ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X