Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಂದ್ರಶೇಖರ್ ಆಝಾದ್ ಜನ್ಮ ದಿನಾಚರಣೆ

ಚಂದ್ರಶೇಖರ್ ಆಝಾದ್ ಜನ್ಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ23 July 2017 8:30 PM IST
share
ಚಂದ್ರಶೇಖರ್ ಆಝಾದ್ ಜನ್ಮ ದಿನಾಚರಣೆ

ಚಿಕ್ಕಬಳ್ಳಾಪುರ, ಜು.23: ಪ್ರಸ್ತುತ ದಿನಗಳಲ್ಲಿ ದೇಶಪ್ರೇಮವನ್ನು ರಾಷ್ಟ್ರೀಯ ಹಬ್ಬಗಳಿಗೆ ಸೀಮಿತಗೊಳಿಸುವ ಜೊತೆಗೆ ಸ್ವಾತಂತ್ರ್ಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ದೇಶಪ್ರೇಮಿಗಳನ್ನೂ ಸಹ ಮರೆಯಲಾಗುತ್ತಿದೆ ಎಂದು ಕೆ.ವಿ. ಮತ್ತು ಪಚಗಿರಿ ದತ್ತಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ಬೇಸರ ವ್ಯಕ್ತಪಡಿಸಿದರು.

ನಗರದ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಶ್ರೀ ಚಂದ್ರಶೇಖರ್ ಆಜಾದ್ ಯುವಕರ ಸಂಘದಿಂದ ಆಯೋಜಿಸಿದ್ದ ಚಂದ್ರಶೇಖರ್ ಆಜಾದ್‌ರ 111ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರಸ್ತುತದ ಯುವ ಪೀಳಿಗೆಯಲ್ಲಿ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡುವ ಪರಿಕಲ್ಪನೇ ಇಲ್ಲವಾಗಿದ್ದು, ದೇಶದ ಬಗ್ಗೆ ಯೋಚಿಸುವ ಬದಲು ಅಂತರ್ಜಾಲ, ಮೊಬೈಲ್‌ಗಳಿಗೆ ಅಂಟಿಕೊಳ್ಳುತ್ತಿರುವುದು ವಿಷಾದನೀಯ ಎಂದರು.
ಆಟವಾಡುವ ವಯಸ್ಸಿನಲ್ಲಿಯೇ ಅಪಾರವಾದ ದೇಶಪ್ರೇಮವನ್ನು ಬೆಳಸಿಕೊಳ್ಳುವ ಮೂಲಕ ಕೆಚ್ಚೆದೆಯಿಂದಲೇ ಬ್ರಿಟೀಷರ ವಿರುದ್ಧ ಹೋರಾಡಿದ ಆಜಾದ್‌ರವರು ತಮ್ಮ 25ನೇ ವಯಸ್ಸಿನಲ್ಲಿಯೇ ಹುತಾತ್ಮರಾದರೂ ಅಪಾರ ಕೀರ್ತಿಯೊಂದಿಗೆ ಎಂದಿಗೂ ಅಳಿಸಲಾಗದ ಇತಿಹಾಸವನ್ನು ಸೃಷ್ಟಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಲಕ್ಷಾಂತರ ಸ್ವಾತಂತ್ರ ಸೇನಾನಿಗಳ ತ್ಯಾಗ ಬಲಿದಾನಗಳಿಂದ ಒಲಿದ ಸ್ವಾತಂತ್ರ್ಯದ ಫಲವನ್ನು ಕೆಲವರಿಗೆ ಮಾತ್ರ ಸೀಮಿತಗೊಳಿಸಿರುವುದು ದುರಂತವಾಗಿದೆ. ಅಲ್ಲದೆ ಬಲಿದಾನದಿಂದ ಪಡೆದ ಸ್ವಾತಂತ್ರ್ಯವನ್ನು ಇಂದಿನ ಯುವ ಪೀಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದ ಅವರು, ಸ್ವಾತಂತ್ರ್ಯಕ್ಕಾಗಿ ಮಡಿದ ವೀರ ಯೋಧರ ವಿಚಾರಧಾರೆಗಳ ಕುರಿತು ಚರ್ಚಿಸುವ ಪರಿಪಾಠ ಬೆಳಸಿಕೊಳ್ಳುವ ಜೊತೆಗೆ ಅವರ ತತ್ವಾದರ್ಶಗಳನ್ನು ಪ್ರಸ್ತುತ ಯುವ ಪೀಳಿಗೆ ಮೈಗೂಡಿಸಿಕೊಳ್ಳುವುದು ಪ್ರಸ್ತುತದ ಸಮಾಜಕ್ಕೆ ಅತ್ಯಗತ್ಯವಾಗಿದೆ ಎಂದರು.
ಅಲ್ಲದೆ ಆಜಾದ್, ಭಗತ್‌ಸಿಂಗ್, ನೇತಾಜಿ ಸೇರಿದಂತೆ ಸ್ವಾತಂತ್ರ್ಯಕ್ಕಾಗಿ ಮಡಿದವರ ಆಲೋಚನೆಗಳು, ಆದರ್ಶ ಹಾಗೂ ದೇಶಾಭಿಮಾನ ಬೆಳಸಿಕೊಂಡಲ್ಲಿ ಮಾತ್ರ ಅವರ ಸ್ಮರಣೆಗಾಗಿ ಆಚರಿಸುವ ದಿನಾಚರಣೆಗಳು ಅರ್ಥಗರ್ಭಿತವಾಗಿ ನೆರವೇರುವುದು ಎಂದು ಅಭಿಪ್ರಾಯಪಟ್ಟರು.

ಶೇಖರ್ ಆಜಾದ್ ಯುವಕರ ಸಂಘದ ವರದರಾಜು ಮಾತನಾಡಿ, ದೇಶವನ್ನು ಬ್ರಿಟೀಷರಿಂದ ಬಂಧಮುಕ್ತಗೊಳಿಸಲು ಚಿಕ್ಕ ವಯಸ್ಸಿನಲ್ಲಿಯೇ ಹೋರಾಟ ಜವಾಬ್ದಾರಿಯನ್ನು ಹೊತ್ತ ಚಂದ್ರಶೇಖರ್ ಆಜಾದ್, ಬ್ರಿಟೀಷರ ಸಿಂಹಸ್ವಪ್ನವಾಗಿ ಕಾಡುತ್ತಿದ್ದ ಕ್ರಾಂತಿಕಾರಿ ಹೋರಾಟಗಾರರಾಗಿದ್ದರು ಎಂದ ಅವರು, ಆಜಾದ್ ಅವರ ದೇಶಪ್ರೇಮ, ಧೈರ್ಯ, ನಿಷ್ಠೆ ಸೇರಿದಂತೆ ಅವರ ಜೀವನದ ಕುರಿತು ತಿಳಿಸಿದರು.

ಚಂದ್ರಶೇಖರ್ ಆಜಾದ್‌ರ 111ನೇ ಜನ್ಮದಿನಾಚರಣೆಯ ಅಂಗವಾಗಿ ನಗರದ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಅನ್ನದಾನ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಮಹೇಶ್, ನಂದಿ ಗ್ರಾಪಂ ಉಪಾಧ್ಯಕ್ಷ ರಮೇಶ್, ನಗರಸಭಾ ಸದಸ್ಯ ಕಿಸಾನ್ ಕೃಷ್ಣಪ್ಪ, ಸತೀಶ್, ಇಂತಿಯಾಜ್, ಕರವೇ ಯುವ ಸೇನೆಯ ರಾಮೇಗೌಡ, ಪ್ರಕಾಶ್, ಗೋಪಿನಾಥ್, ವೆಂಕಟರಾಮಪ್ಪ, ಲಕ್ಷ್ಮಣ್ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X