Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇವಿಎಂ ದೋಷಪೂರ್ಣ: ಪಕ್ಷೇತರ ಅಭ್ಯರ್ಥಿಗೆ...

ಇವಿಎಂ ದೋಷಪೂರ್ಣ: ಪಕ್ಷೇತರ ಅಭ್ಯರ್ಥಿಗೆ ಒತ್ತಿದ್ದ ಮತ ಬಿಜೆಪಿ ಅಭ್ಯರ್ಥಿಗೆ

ದೃಢಪಡಿಸಿದ ಬುಲ್ಢಾಣಾ ಜಿಲ್ಲಾಧಿಕಾರಿ ಕಚೇರಿ

ವಾರ್ತಾಭಾರತಿವಾರ್ತಾಭಾರತಿ23 July 2017 8:53 PM IST
share
ಇವಿಎಂ ದೋಷಪೂರ್ಣ: ಪಕ್ಷೇತರ ಅಭ್ಯರ್ಥಿಗೆ ಒತ್ತಿದ್ದ ಮತ ಬಿಜೆಪಿ ಅಭ್ಯರ್ಥಿಗೆ

ಮುಂಬೈ, ಜು.23: ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳು ದೋಷಪೂರಿತವಾಗಿವೆ ಎನ್ನುವುದನ್ನು ಮಹಾರಾಷ್ಟ್ರದ ಬುಲ್ಢಾಣಾ ಜಿಲ್ಲಾಧಿಕಾರಿ ಕಚೇರಿಯು ಆರ್‌ಟಿಐ ಉತ್ತರವೊಂದರಲ್ಲಿ ದೃಢಪಡಿಸಿದೆ. ಇದು ಇವಿಎಂಗಳಲ್ಲಿ ಯಾವುದೇ ಹಸ್ತಕ್ಷೇಪ ಸಾಧ್ಯವಿಲ್ಲ ಎಂಬ ಚುನಾವಣಾ ಆಯೋಗದ ಪ್ರತಿಪಾದನೆಗೆ ವ್ಯತಿರಿಕ್ತವಾಗಿದೆ.

2017,ಫೆ.16ರಂದು ಬುಲ್ಢಾಣಾ ಜಿಲ್ಲಾ ಪರಿಷತ್‌ಗೆ ಚುನಾವಣೆ ನಡೆದಿದ್ದು, ಲೋನಾರ್ ಪಟ್ಟಣದ ಸುಲ್ತಾನಪುರದ ಮತಗಟ್ಟೆ ಸಂಖ್ಯೆ 56ರಲ್ಲಿ ಈ ಇವಿಎಂ ವಂಚನೆ ನಡೆದಿತ್ತು ಎಂದು ಆರ್‌ಟಿಐ ಕಾರ್ಯಕರ್ತ ಅನಿಲ್ ಗಲಗಲಿ ಅವರನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ.

ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಆಶಾ ಅರುಣ ರೆರೆ ಅವರಿಗೆ ತೆಂಗಿನಕಾಯಿಯ ಚಿಹ್ನೆಯನ್ನು ನೀಡಲಾಗಿತ್ತು. ಮತದಾರರು ಇವಿಎಮ್‌ನಲ್ಲಿ ಪ್ರತಿಬಾರಿ ತೆಂಗಿನಕಾಯಿ ಚಿಹ್ನೆಯ ಗುಂಡಿಯನ್ನು ಒತ್ತಿದಾಗಲೂ ಬಿಜೆಪಿಯ ಚುನಾವಣಾ ಚಿಹ್ನೆಯಾದ ಕಮಲದ ಎದುರಿನ ಮಿಂಚುದೀಪ ಬೆಳಗುತ್ತಿತ್ತು. ಅಂದರೆ ಪಕ್ಷೇತರ ಅಭ್ಯರ್ಥಿಗೆ ಒತ್ತಿದ್ದ ಮತ ಬಿಜೆಪಿ ಅಭ್ಯರ್ಥಿಗೆ ಹೋಗುತ್ತಿತ್ತು. ಚುನಾವಣಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದ ತನ್ನ ತನಿಖಾ ವರದಿಯಲ್ಲಿ ಇದನ್ನು ಸ್ಪಷ್ಟಪಡಿಸಿದ್ದರು ಮತ್ತು ಈ ವಿವರಗಳು ಆರ್‌ಟಿಐ ಅರ್ಜಿಗೆ ಉತ್ತರದಲ್ಲಿ ಲಭ್ಯವಾಗಿವೆ ಎಂದು ಗಲಗಲಿ ಹೇಳಿದ್ದಾರೆ.

ರೆರೆ ಅವರ ದೂರು ನೀಡಿದ್ದ ಬಗ್ಗೆ ಮಾಹಿತಿ ಪಡೆದ ಗಲಗಲಿ ಜೂ.16ರಂದು ಬುಲ್ಢಾಣಾ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ವಿಭಾಗಕ್ಕೆ ಮಾಹಿತಿ ಹಕ್ಕು ಕಾಯ್ದೆ ಯಡಿ ಅರ್ಜಿ ಸಲ್ಲಿಸಿ ಚುನಾವಣಾಧಿಕಾರಿಯು ಸಲ್ಲಿಸಿದ್ದ ತನಿಖಾ ವರದಿಯಲ್ಲಿನ ವಿವರಗಳನ್ನು ಕೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X