ಇಬ್ಬರು ಮೃತ್ಯು
ಬೆಂಗಳೂರು, ಜು.24: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ದುರ್ಘಟನೆ ನಗರ ವ್ಯಾಪ್ತಿಯಲ್ಲಿ ನಡೆದಿದೆ.
ಕಲ್ಲು ಕ್ವಾರಿಯಲ್ಲಿ ಬಿದ್ದು 30 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿನ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ, ವ್ಯಕ್ತಿಯ ಚಹರೆ, ವಿಳಾಸ ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅದೇ ರೀತಿ, ಮದ್ಯದ ಅಮಲಿನಲ್ಲಿ ಆಯತಪ್ಪಿ ಮೋರಿಗೆ ಬಿದ್ದು ಬಿಳೇಕಲ್ಲಹಳ್ಳಿಯ ವಿಜಯಾಬ್ಯಾಂಕ್ ಲೇಔಟ್ ನಿವಾಸಿ ಚಂದ್ರಕುಮಾರ್(32) ಮೃತಪಟ್ಟಿರುವ ಘಟನೆ ಮೈಕೋಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾರ್ಖಾನೆಯೊಂದರಲ್ಲಿ ನೌಕರನಾಗಿದ್ದ ಚಂದ್ರಕುಮಾರ್ ರವಿವಾರ ರಾತ್ರಿ ಸ್ನೇಹಿತನ ಜೊತೆ ಮದ್ಯ ಸೇವಿಸಿ ಮನೆಗೆ ವಾಪಸ್ಸು ಆಗುತ್ತಿದ್ದ ವೇಳೆ ಆಯತಪ್ಪಿ ಮೋರಿಗೆ ಬಿದ್ದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





