Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜುಜುಬಿ ಮೇಲ್ಮನವಿ ಸಲ್ಲಿಸಿದ್ದಕ್ಕಾಗಿ...

ಜುಜುಬಿ ಮೇಲ್ಮನವಿ ಸಲ್ಲಿಸಿದ್ದಕ್ಕಾಗಿ ಎಸ್‌ಬಿಐಗೆ ಒಂದು ಲ.ರೂ.ದಂಡ!

ವಾರ್ತಾಭಾರತಿವಾರ್ತಾಭಾರತಿ24 July 2017 7:20 PM IST
share
ಜುಜುಬಿ ಮೇಲ್ಮನವಿ ಸಲ್ಲಿಸಿದ್ದಕ್ಕಾಗಿ ಎಸ್‌ಬಿಐಗೆ ಒಂದು ಲ.ರೂ.ದಂಡ!

ಹೊಸದಿಲ್ಲಿ,ಜು.24: 11 ವರ್ಷಗಳ ಹಿಂದೆ ಕಳ್ಳತನವಾಗಿದ್ದ ತನ್ನ ಗ್ರಾಹಕರೋರ್ವರ ಎಟಿಎಂ ಕಾರ್ಡ್‌ನ್ನು ಸ್ಥಗಿತಗೊಳಿಸಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲು ವಿಫಲವಾಗಿದ್ದಕ್ಕೆ ಅವರಿಗೆ 1.29 ಲ.ರೂ.ಗಳನ್ನು ಮರಳಿಸುವಂತೆ ದಿಲ್ಲಿ ರಾಜ್ಯ ಗ್ರಾಹಕರ ವೇದಿಕೆಯು ಭಾರತೀಯ ಸ್ಟೇಟ್ ಬ್ಯಾಂಕ್‌ಗೆ ಆದೇಶಿಸಿದೆ. ಅಲ್ಲದೆ ಜಿಲ್ಲಾ ವೇದಿಕೆಯ ತೀರ್ಪನ್ನು ಪ್ರಶ್ನಿಸಿ ತನ್ನ ಮುಂದೆ ಜುಜುಬಿ ಮೇಲ್ಮನವಿಯನ್ನು ಸಲ್ಲಿಸಿದ್ದಕ್ಕಾಗಿ ಒಂದು ಲ.ರೂ.ದಂಡವನ್ನೂ ವಿಧಿಸಿದೆ.

 ಓಖ್ಲಾ ನಿವಾಸಿ ರಹೀಮುನ್ನೀಸಾ ಶಹಾನಾ ಅವರ ಹೊಸ ಎಟಿಎಂ ಕಾರ್ಡ್ ಮತ್ತು ಪಿನ್ ಸಂಖ್ಯೆಯಿದ್ದ ಕವರ್, 5,000 ರೂ.ನಗದು ಹಾಗೂ ಇತರ ಸೊತ್ತುಗಳನ್ನು ಒಳಗೊಂಡಿದ್ದ ಬ್ಯಾಗ್ 2006,ಮಾ.13ರಂದು ಕಳ್ಳತನವಾಗಿತ್ತು. ಶಹಾನಾ ತನ್ನ ಎಟಿಎಂ ಕಾರ್ಡ್‌ನ್ನು ಒಂದು ಬಾರಿಯೂ ಬಳಸಿರಲಿಲ್ಲ. ಅವರು ತಕ್ಷಣ ನಿಜಾಮಮುದ್ದೀನ್ ಎಸ್‌ಬಿಐ ಶಾಖೆಗೆ ತೆರಳಿ ಕಾರ್ಡ್‌ನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳನ್ನು ಕೋರಿಕೊಂಡಿದ್ದರು. ಆದರೆ 15 ದಿನಗಳ ಬಳಿಕ ಬ್ಯಾಂಕಿಗೆ ತೆರಳಿ ಪರಿಶೀಲಿಸಿದಾಗ ಕಳ್ಳತನವಾಗಿದ್ದ ಎಟಿಎಂ ಕಾರ್ಡ್ ಬಳಸಿ ಮಾ.13ರಿಂದ ಮಾ.21ರ ನಡುವೆ ಅವರ ಖಾತೆಯಲ್ಲಿದ್ದ 1,29,060 ರೂ.ಗಳ ಅಷ್ಟೂ ಮೊತ್ತವನ್ನು ಲಪಟಾಯಿಸಲಾಗಿತ್ತು.

2006,ಮಾ.30ರಂದು ಈ ಬಗ್ಗೆ ಬ್ಯಾಂಕಿಗೆ ಲಿಖಿತ ದೂರು ಸಲ್ಲಿಸಿದ್ದ ಶಹಾನಾ ಪೊಲೀಸರಲ್ಲಿಯೂ ದೂರು ದಾಖಲಿಸಿದ್ದರು. ಆದರೆ ನಿರೀಕ್ಷಿತ ಫಲ ದೊರೆಯದಿದ್ದಾಗ ಜಿಲ್ಲಾ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಿದ್ದರು.

ಶಹಾನಾರ ದೂರಿನ ವಿಚಾರಣೆ ನಡೆಸಿದ್ದ ಜಿಲ್ಲಾ ಗ್ರಾಹಕರ ವೇದಿಕೆಯು ಬ್ಯಾಂಕಿನ ತಕರಾರುಗಳನ್ನು ತಳ್ಳಿ ಹಾಕಿ 1,29,060 ರೂ.ಗಳನ್ನು ಅವರಿಗೆ ಮರಳಿಸುವಂತೆ ಆದೇಶಿಸಿತ್ತು. ಇದರ ವಿರುದ್ಧ ಬ್ಯಾಂಕ್ ರಾಜ್ಯ ಗ್ರಾಹಕ ವೇದಿಕೆಗೆ ಮೇಲ್ಮನವಿ ಸಲ್ಲಿಸಿತ್ತು.

 ಕಳ್ಳತನವಾಗಿದ್ದ ಎಟಿಎಂ ಕಾರ್ಡ್‌ನ್ನು ಸ್ಥಗಿತಗೊಳಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಲ್ಲಿ ಬ್ಯಾಂಕ್ ವಿಫಲವಾಗಿದೆ ಮತ್ತು ಇದು ಸೇವಾ ಲೋಪದ ಸ್ಪಷ್ಟ ಪ್ರಕರಣವಾಗಿದೆ. ಗ್ರಾಹಕರಿಗೆ ಹಣವನ್ನು ಮರಳಿಸುವ ಬದಲು ಸುಳ್ಳು ಮತ್ತು ಕ್ಷುಲ್ಲಕ ಮೇಲ್ಮನವಿಯನ್ನು ಸಲ್ಲಿಸಿದೆ ಎಂದು ಹೇಳಿದ ರಾಜ್ಯ ವೇದಿಕೆಯು ಮೇಲ್ಮನವಿಯನ್ನು ವಜಾಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X